ಕಲ್ಪ ಮೀಡಿಯಾ ಹೌಸ್ | ರಿಪ್ಪನ್‌ಪೇಟೆ |
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಹಾರಾಷ್ಟ್ರ ರಾಜ್ಯದ ಪೂನ ನಗರದಿಂದ ಜೈನರ ದಕ್ಷಿಣದ ಕಾಶಿ ಹೊಂಬುಜ ಮಠಕ್ಕೆ ತೆರಳುತಿದ್ದ ಭಕ್ತರ ಕಾರು ಹೆದ್ದಾರಿಪುರ ಸಮೀಪದ ಜಂಬಳ್ಳಿ ತಿರುವಿನಲ್ಲಿ ಮುಂಜಾನೆ ಪಲ್ಟಿಯಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಒಂದೇ ಕುಟುಂಬದ 4 ಜನರು ಪ್ರಯಾಣಿಸುತಿದ್ದರು ಎನ್ನಲಾಗಿದೆ.
Also read: Environment Month Celebration– 2022 at SAIL-VISL
ಅಪಘಾತದ ವೇಳೆ ಕಾರಿನಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post