ಕಲ್ಪ ಮೀಡಿಯಾ ಹೌಸ್ | ರಿಪ್ಪನ್‌ಪೇಟೆ |
ಸಾಲಬಾಧೆಗೆ ಬೇಸತ್ತು ರೈತರೊಬ್ಬರು #Farmer ತಮ್ಮದೇ ಅಡಿಕೆ ತೋಟದಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ #Suicide ಮಾಡಿಕೊಂಡಿರುವ ಘಟನೆ ನಡೆದಿದೆ.
ಹರತಾಳು ಗ್ರಾಪಂ ವ್ಯಾಪ್ತಿಯ ಕೆ ಹುಣಸವಳ್ಳಿ ಗಣಂದೂರು ಗ್ರಾಮದ ಪುಟ್ಟನಾಯ್ಕ್ (80) ಮೃತ ರು. ಮೃತ ಪುಟ್ಟನಾಯ್ಕ್ ಕೃಷಿ ಉದ್ದೇಶದಿಂದ ಸಾಲ ಮಾಡಿದ್ದು ಬೆಳೆ ನಷ್ಟದಿಂದ ಸಾಲ ಕಟ್ಟಲಾಗದೆ ಬ್ಯಾಂಕ್ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾಲಕ್ಕೆ ಬಡ್ಡಿ ಹೆಚ್ಚಾದ ಕಾರಣ ಬೇಸತ್ತಿದ್ದರು ಎನ್ನಲಾಗಿದೆ.
Also read: ನವದೆಹಲಿ | ಈ ಕಾರಣಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ ಆರಾಧ್ಯ ಬಚ್ಚನ್
ಇವರಿಗೆ ಕೃಷ್ಣ ಪ್ರಗತಿ ಗ್ರಾಮೀಣ ಬ್ಯಾಂಕ್ ಹೊಸನಗರ 13ಲಕ್ಷ , ತೋಟಗಾರ್ಸ್ ಅಡಿಕೆ ಮಂಡಳಿ ಸಾಗರ 2.5 ಲಕ್ಷ , ಪಿಎಲ್ ಡಿ ಬ್ಯಾಂಕ್ 2.5 ಲಕ್ಷ ಸಾಲವಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಮೂರು ಗಂಡು ಹಾಗೂ ಎರಡು ಹೆಣ್ಣು ಮಕ್ಕಳನ್ನು ಹೊಂದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post