ಕಲ್ಪ ಮೀಡಿಯಾ ಹೌಸ್ | ರಿಪ್ಪನಪೇಟೆ |
ಒಗ್ಗಟ್ಟಿನಿಂದ ಎಲ್ಲರೂ ಕೂಡಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಹೇಳಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಿಪ್ಪನ ಪೇಟೆ ವೃತ್ತದಲ್ಲಿ ಗುರುವಾರ ಹೊಸನಗರ- ರಿಪ್ಪನಪೇಟೆ ಬ್ಲಾಕ್ ಕಾಂಗ್ರೆಸ್ ಘಟಕ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಸಮಸ್ಯೆಗಳನ್ನು ಹೇಳಿಕೊಂಡು ಕಚೇರಿಗೆ ಬಂದ ಅಶಕ್ತರು, ಶೋಷಿತ ಕುಟುಂಬಗಳಿಗೆ ನ್ಯಾಯ ಒದಗಿಸಿಕೊಡಬೇಕು. ಇಲ್ಲಿ ಪಕ್ಷ ಚಟುವಟಿಕೆಗಳಿಗೆ ಮಾತ್ರ ಹೆಚ್ಚು ಒತ್ತು ನೀಡದೆ, ಸಾರ್ವಜನಿಕ ಸಮಸ್ಯೆಗಳ ಪರಿಹರಿಸುವ ಬಗ್ಗೆಯೂ ಆಸಕ್ತಿ ತೋರಬೇಕು. ಜನಸಾಮಾನ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್ ಪಕ್ಷದ ಯೋಜನೆಗಳ ಬಗ್ಗೆ ಮನವರಿಕೆ ಮಾಡಬೇಕು ಎಂದರು.
Also read: ಚುನಾವಣೆಗಾಗಿ ಮಾತನಾಡುವ ವ್ಯಕ್ತಿ ನಾನಲ್ಲ | ಸಂಸದ ಬಿ.ವೈ. ರಾಘವೇಂದ್ರ
ಅರಣ್ಯ ಮತ್ತು ಕೈಗಾರಿಕಾ ನಿಗಮ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ಗೆಲುವಿಗೆ ಎಲ್ಲರೂ ಕೂಡಿ ಒಗ್ಗಟ್ಟಿನ ಬಲ ಪ್ರದರ್ಶಿಸಬೇಕಿದೆ. ರಾಜಕೀಯದಲ್ಲಿ ದ್ವೇಷ- ಅಸೂಯೆ, ಮನಃಸ್ಥಾಪಗಳು ಸಹಜ. ಆದರೆ, ಇದನ್ನು ಬದಿಗೆ ಸರಿಸಿ, ಗೀತಾ ಅವರ ಗೆಲುವಿಗೆ ಎಲ್ಲರೂ ಸಹಕರಿಸಬೇಕು ಎಂದರು.
ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ ತಡಕಲ್, ನಟ ಶಿವರಾಜಕುಮಾರ್, ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಆಯನೂರು ಮಂಜುನಾಥ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಶ್ವೇತ ಬಂಡಿ, ಅನಿತಾ ಕುಮಾರಿ, ಬಂಡಿ ರಾಮಚಂದ್ರಪ್ಪ, ಬಿ.ಪಿ. ರಾಮಚಂದ್ರಪ್ಪ, ಸಾಕಮ್ಮ, ಧನಲಕ್ಷ್ಮಿ, ಸುಮ ಸುಬ್ರಹ್ಮಣ್ಯ, ವೈ.ಎಚ್. ನಾಗರಾಜ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post