ಕಲ್ಪ ಮೀಡಿಯಾ ಹೌಸ್ | ರಿಪ್ಪನ್’ಪೇಟೆ |
ಮೂತ್ರ ವಿಸರ್ಜನೆ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಗವಟೂರಿನ ಹಳೂರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೃತ ದುರ್ದೈವಿಯನ್ನು ಕಾರ್ತಿಕ್(19) ಎಂದು ಗುರುತಿಸಲಾಗಿದೆ.
ಇಂದು ಬೆಳಗಿನ ಜಾವ ತನ್ನ ಮನೆಯ ಸಮೀಪದ ಐಬಿಎಕ್ಸ್ ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಕಾರ್ತಿಕ್ ತೆರಳಿದ್ದಾನೆ. ಈ ಭಾಗದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಯುವಕ ಅಲ್ಲಿ ವಿದ್ಯುತ್ ಪ್ರವಹಿಸಿದ್ದು, ಈ ವೇಳೆ ತಂತಿ ಮೇಲೆಯೇ ಆತ ಬಿದ್ದಿದ್ದಾನೆ.
Also read: ವಾಲ್ಮೀಕಿ ನಿಗಮ ಹಗರಣ | ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿಗೆ
ಇದನ್ನು ಗಮನಿಸಿದ ಸಮೀಪದ ಮನೆಯವರು ಆತನನ್ನು ಆಸ್ಪತ್ರೆಗೆ ಸಾಗಿಸಿದರೂ ಅಷ್ಟೆಲ್ಲಾಗಲೇ ಆತ ಮೃತಪಟ್ಟಿದ್ದ ಎಂದು ವರದಿಯಾಗಿದೆ.
ಮೃತ ಕಾರ್ತಿಕ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದನು. ರಿಪ್ಪನ್’ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















