ಮಂಡ್ಯ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದವರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.
ಮದ್ದೂರು ಪಟ್ಟಣದಲ್ಲಿ ಇಂದು ಮುಂಜಾನೆ ಘಟನೆ ಸಂಭವಿಸಿದ್ದು, ಅಪಘಾತಕ್ಕೀಡಾದ ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು ಎನ್ನಲಾಗಿದೆ.
ಕಾರು ಮದ್ದೂರು ಪಟ್ಟಣದಲ್ಲಿ ವೇಗವಾಗಿ ಸಂಚರಿಸುವ ವೇಳೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆ ಪರಿಣಾಮ ಅಪಘಾತ ಸಂಭವಿಸಿದೆ. ಮೃತರನ್ನು ಜಯದೀಪ್(29), ಜಿನ್ನಿ(27) ಜ್ಞಾನತೀರ್ಥ(29) ಕಿರಣ್(30) ಸ್ಥಳದಲ್ಲೇ ಸಾವನ್ನಪ್ಪಿದ್ಧಾರೆ.
Discussion about this post