ಕಲ್ಪ ಮೀಡಿಯಾ ಹೌಸ್ | ಸೊರಬ |
ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.
Also Read: ನಂದಿನಿ ಹಾಲಿನ ಮಾರಾಟ ದರ ಹೆಚ್ಚಿಸಲು ಸಿಎಂಗೆ ಕೆಎಂಎಫ್ ಮನವಿ
ತಾಲೂಕಿನ ಉಳವಿ-ಮಳಲಗದ್ದೆ ನಡುವಿನಲ್ಲಿ ಅಪಘಾತ ಸಂಭವಿಸಿದೆ. ಅವಲಗೋಡು ಗ್ರಾಮದ ಯುವರಾಜ್ ಗಣಪತಿ (೩೮) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ.
ಉಳವಿಯಿಂದ ಅವಲಗೋಡು ಗ್ರಾಮಕ್ಕೆ ತೆರಳುತ್ತಿದ್ದ ಬೈಕ್’ಗೆ ಸೊರಬದಿಂದ ಸಾಗರ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಘಟನೆಗೆ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗಿದೆ.
Also Read: ಮಾತೃಭಾಷೆಗಳೇ ಸಾರ್ವಭೌಮ: ಇದನ್ನು ಎಲ್ಲರೂ ಗೌರವಿಸಬೇಕು – ಸಿಎಂ
ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಸ್ಥಳಕ್ಕೆ 112 ಪೊಲೀಸ್ ಸಿಬ್ಬಂದಿ ತೆರಳಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಮೃತ ಯುವರಾಜ್ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post