ಸಕಲೇಶಪುರ: ಇಂದು ಬೆಳ್ಳಂಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತರಾಗಿರುವ ದುರ್ಘಟನೆ ನಡೆದಿದೆ.
ಹಾಸನ ಜಿಲ್ಲೆ ಸಕಲೇಶಪುರದ ಮಾರನಹಳ್ಳಿ ಬಳಿ ಘಟನೆ ನಡೆದಿದ್ದು, ಕೆಎಸ್’ಆರ್’ಟಿಸಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ನಾಲ್ವರು ಕೊನೆಯುಸಿರೆಳೆದಿದ್ದಾರೆ. ಇಬ್ಬರಿಗೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
Discussion about this post