ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶದಲ್ಲಿ ಉದ್ಯೋಗ #Job ಸೃಷ್ಟಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ರೋಜ’ಗಾರ್ ಮೇಳದಡಿ #RojgarMela ಮೇ 23ರ ನಾಳೆ ಬೆಳಿಗ್ಗೆ 11 ಗಂಟೆಗೆ 19ನೇ ರೋಜ’ಗಾರ್ ಮೇಳ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ #PMNarendraModi ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.
Also Read>> ಬೆಂಗಳೂರು | ವಿಭಾಗೀಯ ರೈಲ್ವೆ ಬಳಕೆದಾರರ ಸಮಾಲೋಚನಾ ಸಭೆ ಯಶಸ್ವಿ
ಕಾರ್ಯಕ್ರಮದ ಅಂಗವಾಗಿ ಪ್ರಧಾನಿಗಳು ದೇಶದ ಯುವಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ಉದ್ಯೋಗಾವಕಾಶಗಳ ವಿಸ್ತರಣೆಯ ಬಗ್ಗೆ ಸರ್ಕಾರದ ದೃಷ್ಟಿಕೋನವನ್ನು ಹಂಚಿಕೊಳ್ಳಲಿದ್ದಾರೆ.
ರೋಜ’ಗಾರ್ ಮೇಳವು ಪ್ರಧಾನಮಂತ್ರಿಯವರ ಉದ್ಯೋಗ ಸೃಷ್ಟಿ ಬದ್ಧತೆಯ ಪ್ರಮುಖ ಪ್ರತಿಫಲವಾಗಿದ್ದು, ದೇಶದಾದ್ಯಂತ ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುವಲ್ಲಿ ಮಹತ್ವದ ಪಾತ್ರವಹಿಸಿದೆ. ಈಗಾಗಲೇ ನಡೆದ 18 ಮೇಳಗಳ ಮೂಲಕ ಸುಮಾರು 12 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ.
Also Read>> ತಾಳಗುಪ್ಪ-ಮೈಸೂರು, ಬೆಂಗಳೂರು-ಹೊಸಪೇಟೆ ಸೇರಿ 8 ರೈಲುಗಳು ಈ 8 ದಿನ ಬಾಣಾವರದಲ್ಲಿ ನಿಲುಗಡೆ
ಈ ಬಾರಿ 19ನೇ ಮೇಳವು ದೇಶದಾದ್ಯಂತ 47 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳು #IndianRailway ರೈಲ್ವೆ, ಗೃಹ ವ್ಯವಹಾರಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಣಕಾಸು ಸೇವೆಗಳು ಹಾಗೂ ಉನ್ನತ ಶಿಕ್ಷಣ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ನೇಮಕಗೊಳ್ಳಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















