ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾನೂನು ಬಾಹಿರ ಹಾಗೂ ರೌಡಿ ಚಟುವಟಿಕೆಗಳಲ್ಲಿ ಮತ್ತೆ ಪಾಲ್ಗೊಳ್ಳುವುದು ಗಮನಕ್ಕೆ ಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ರೌಡಿ ಶೀಟರ್’ಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ದೊಡ್ಡಪೇಟೆ, ಕೋಟೆ, ತುಂಗಾನಗರ, ಶಿವಮೊಗ್ಗ ಗ್ರಾಮಾಂತರ, ಜಯನಗರ ಮತ್ತು ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿನ ಒಟ್ಟು 82 ರೌಡಿಗಳ ಪೆರೇಡನ್ನು ಡಿಎಆರ್ ಆವರಣದಲ್ಲಿ ನಡೆಸಿ ಅವರು ಎಚ್ಚರಿಕ ನೀಡಿದ್ದಾರೆ.
ಹಾಜರಿದ್ದ ರೌಡಿ ಶೀಟರ್’ಗಳ ಆದಾಯದ ಮೂಲ ಮತ್ತು ಜೀವನೋಪಾಯಕ್ಕಾಗಿ ಮಾಡುತ್ತಿರುವ ಕೆಲಸಗಳ ಬಗ್ಗೆ ವಿಚಾರಣೆ ನಡೆಸಿದರು.
ವಾರದಲ್ಲಿ ಎರಡು ದಿನಗಳು ಕಡ್ಡಾಯವಾಗಿ ಠಾಣೆಗೆ ಹಾಜರಾಗಿ ಹಾಜರಾತಿ ನೀಡುವಂತೆ ಸೂಚನೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಯಾವುದಾದರೂ ಅಪಾರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆಯೂ ಸಹಾ ಪರಿಶಿಲನೆ ನಡೆಸಿದರು.
ಇನ್ನು ಮುಂದೆ ಯಾವುದೇ ಕಾನೂನು ಬಾಹಿರ ಚಟುವಟಿಕೆ ಮತ್ತು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವುದು ಕಂಡುಬAದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post