ಕಲ್ಪ ಮೀಡಿಯಾ ಹೌಸ್
ರಷ್ಯಾ ಮತ್ತು ಉಕ್ರೇನ್ Russia – Ukraine ನಡುವಿನ ಯುದ್ಧದ ಕರಿನೆರಳು ಜಾಗತಿಕ ಮಟ್ಟದಲ್ಲಿ ತನ್ನ ಪ್ರಭಾವ ಬೀರುತ್ತಿದ್ದು, ದಶಕದ ಬಳಿಕ ಮೊದಲ ಬಾರಿಗೆ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 130 ಯುಎಸ್ ಡಾಲರ್ ಗಡಿ ದಾಟಿದ್ದು, ಇಂದು ಮತ್ತೆ ಸಾರ್ವಕಾಲಿಕ ಏರಿಕೆ ಕಂಡಿರುವುದು ಇಂಧನ ಬಳಕೆದಾರರಲ್ಲಿ ತಲ್ಲಣ ಸೃಷ್ಟಿಸಿದೆ.
ಈ ನಡುವೆ ಭಾರತದ ಸರ್ಕಾರಿ ತೈಲ ಕಂಪನಿಗಳು ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ Petrol-Diesel ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಆದರೆ, ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕಳೆದ ನವೆಂಬರ್ 4ರಿಂದ ಇಂಧನ ದರ ಸ್ಥಿರವಾಗಿರುವುದು ಸಮಾಧಾನಕರ ಸಂಗತಿಯಾಗಿದೆ.
ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧ ಆರಂಭವಾದಾಗಿನಿಂದಲೇ ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದರಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವಾಗುತ್ತದೆ ಎಂಬ ಬಗ್ಗೆ ಅಭಿಪ್ರಾಯಗಳು ಕೇಳಿಬರುತ್ತಿದ್ದು, ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ದಶಕದ ಬಳಿಕ ಗರಿಷ್ಠ ಮಟ್ಟದಲ್ಲಿರುವುದರಿಂದ ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದರೂ, ಅದು ಪೆಟ್ರೋಲ್- ಡೀಸೆಲ್ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ ಎನ್ನಲಾಗಿದೆ.
Also read: ಜಾಗತಿಕ ಮಟ್ಟದಲ್ಲಿ ರಷ್ಯಾ-ಉಕ್ರೇನ್ ಯುದ್ಧದ ಕರಿನೆರಳು: ಕಚ್ಚಾತೈಲ ಬೆಲೆ ಏರಿಕೆ
ಕೆಲವು ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 131.2 ಯುಸ್ ಡಾಲರ್‌ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಅಂತ್ಯದ ಸೆಷನ್‌ಗೆ ಹೋಲಿಸಿದರೆ 3.25 ಯುಸ್ ಡಾಲರ್ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post