ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚೆನ್ನೈ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಕೊರೋನಾ ವರದಿ ನೆಗೆಟಿವ್ ಬಂದಿದ್ದು, ಅವರು ಗುಣಮುಖರಾಗುತ್ತಿದ್ದಾರೆ.
ಈ ಕುರಿತಂತೆ ಇಂದು ಮಾತನಾಡಿರುವ ಎಸ್’ಪಿಬಿ ಪುತ್ರ ಎಸ್.ಪಿ. ಚರಣ್ ಅವರು, ನನ್ನ ತಂದೆಯ ವರದಿ ನೆಗೆಟಿವ್ ಬಂದಿದೆ. ಅಲ್ಲದೇ, ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದಿದ್ದಾರೆ.
ನನ್ನ ತಂದೆಯ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಹಾಗೂ ಹಾರೈಸಿದ ಎಲ್ಲ ಗಣ್ಯರಿಗೆ ಹಾಗೂ ಅಭಿಮಾನಿಗಳಿಗೆ ಧನ್ಯವಾದಗಳು. ತಂದೆಯವರ ಆರೋಗ್ಯದ ಕುರಿತಾಗಿ ಮಾಹಿತಿಯನ್ನು ಆಗಾಗ ಹಂಚಿಕೊಳ್ಳುತ್ತೇನೆ ಎಂದಿದ್ದಾರೆ.
Get In Touch With Us info@kalpa.news Whatsapp: 9481252093

















