No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹುತಾತ್ಮ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳ ತ್ಯಾಗ ಮರೆಯಲಾಗದು: ನ್ಯಾ.ಮಂಜುನಾಥ

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ

kalpa News by kalpa News
September 11, 2026
in ಶಿವಮೊಗ್ಗ
0
sacrifice-martyred-forest-dept-officer-cannot-be-forgotten
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅರಣ್ಯ, ವನ್ಯಜೀವಿ ಮತ್ತು ನೈಸರ್ಗಿಕ ಸಂಪತ್ತನ್ನು ಸಂರಕ್ಷಿಸುವ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಾ ಹುತಾತ್ಮರಾದ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಾಗೂ ಅರಣ್ಯ ರಕ್ಷಕರ ತ್ಯಾಗವನ್ನು ಮರೆಯಲಾಗದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನ್ಯಾ. ಮಂಜುನಾಥ ಜಿ.ಎ. ಅವರು ಹೇಳಿದರು.

ಅವರು ಇಂದು ಅರಣ್ಯ ಇಲಾಖೆಯು ನಗರದ ಶ್ರೀಗಂಧದ ಕೋಠಿಯಲ್ಲಿರುವ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.dk shivakumar led karnataka government 100 days celebration

ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವುದು ಸಾಮಾನ್ಯ ವಿಷಯವೇನಲ್ಲ. ಅನೇಕ ಸಂಘರ್ಷಗಳು ಕಾಣುತ್ತವೆ. ಅರಣ್ಯದಲ್ಲಿನ ಕೆಲಸ ಕಚೇರಿಯಲ್ಲಿನ ಕೆಲಸಕ್ಕಿಂತ ಭಿನ್ನವಾದುದು. ಕಾರ್ಯಕ್ಷೇತ್ರದಲ್ಲಿ ಎದುರಾಗುವ ಸಮಸ್ಯೆ-ಸವಾಲುಗಳನ್ನು ಎದುರಿಸಲು ಚಾಣಾಕ್ಷತೆ, ಕಠಿಣ ನಿರ್ಧಾರ, ಗಟ್ಟಿ ಗುಂಡಿಗೆ ಇರಬೇಕು ಎಂದ ಅವರು, ನಾಲ್ಕು ಗೋಡೆಗಳ ನಡುವಿನ ಸಮಸ್ಯೆಯನ್ನು ಎದುರಿಸಬಹುದು. ಆದರೆ, ಹೊರಗಿನ ಸಮಸ್ಯೆಗಳ ಇತ್ಯರ್ಥಕ್ಕೆ ಕೌಶಲ್ಯ, ವೃತ್ತಿಪರತೆ ಇರಬೇಕು. ಇವೆಲ್ಲವೂ ಅರಿತಿದ್ದು, ಸಾವು-ನೋವುಗಳು ನಡೆಯುವುದು ಮನುಷ್ಯನ ಬದುಕನ್ನು ಆತಂಕಕ್ಕೆ ತಳ್ಳುತ್ತದೆ. ನೆಮ್ಮದಿ ಕಳೆದು ಹೋಗುತ್ತದೆ ಎಂದವರು ನುಡಿದರು.

Also read>> ಸರ್ಕಾರಿ ಶಾಲೆ, ಮೆಗ್ಗಾನ್ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ

ಎಲ್ಲಾ ವಾಸ್ತವ ಸತ್ಯಗಳನ್ನು ಅರಿತ ನಾವು ಮೌಲಿಕವಾದ ವನ ಸಂಪತ್ತನ್ನು ಉಳಿಸಿ, ಬೆಳೆಸದೆ ಹೋದರೆ ಅದೊಂದು ಸಾಮಾಜಿಕ ದುರಂತವಲ್ಲದೇ ಮತ್ತೇನೂ ಅಲ್ಲ. ಅರಣ್ಯದ ನಾಶ ಎಂದರೆ ಅದು ಮನುಕುಲದ ವಿನಾಶವೇ ಸರಿ ಎಂದ ಅವರು, ಅರಣ್ಯ ರಕ್ಷಣೆಯಲ್ಲಿ ಕಾರ್ಯನಿರತ 65ಸಿಬ್ಬಂದಿಗಳು ಹುತಾತ್ಮರಾಗಿದ್ದು, ಅತ್ಯಂತ ನೋವಿನ ಸಂಗತಿ. ಅವರೆಲ್ಲರನ್ನು ಸ್ಮರಿಸಿಕೊಂಡು ಶ್ರದ್ಧಾಂಜಲಿ ಅರ್ಪಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಟಿ.ಹನುಮಂತಪ್ಪ ಅವರು ಮಾತನಾಡಿ, ಅರಣ್ಯ ಹುತಾತ್ಮರ ತ್ಯಾಗವು ಕೇವಲ ಇಲಾಖೆಯ ಕರ್ತವ್ಯನಿಷ್ಠೆಯ ಸಂಕೇತವಲ್ಲ; ಅದು ಪರಿಸರ ಸಂರಕ್ಷಣೆ, ಜೀವವೈವಿಧ್ಯ ರಕ್ಷಣೆ ಮತ್ತು ಭವಿಷ್ಯದ ಪೀಳಿಗೆಯ ಹಿತಕ್ಕಾಗಿ ಮಾಡಿದ ಸೇವೆಯ ಪ್ರತೀಕವಾಗಿದೆ ಎಂದರು.Kumadvathi College Shikariura

ಅರಣ್ಯ ಸಂರಕ್ಷಣೆಯಲ್ಲಿ ಎದುರಾಗುವ ಅಪಾಯಗಳು, ಕಾಡುಗಳ ಮಹತ್ವ ಹಾಗೂ ವನ್ಯಜೀವಿಗಳ ರಕ್ಷಣೆಯ ಅಗತ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಾದುದು ಇಂದಿನ ತುರ್ತು ಅಗತ್ಯ. ಅರಣ್ಯ ಸಂಪತ್ತು ಮಾನವನಿಗೆ ಶುದ್ಧ ಗಾಳಿ, ನೀರು, ಮಳೆ, ಔಷಧೀಯ ಸಸ್ಯಗಳು ಹಾಗೂ ಜೀವವೈವಿಧ್ಯವನ್ನು ಒದಗಿಸುವ ಅರಣ್ಯವನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದರು.

ಅರಣ್ಯ ಹುತಾತ್ಮರನ್ನು ಸ್ಮರಿಸುವ ಈ ಸಂದರ್ಭದಲ್ಲಿ ಅವರ ಧೈರ್ಯ, ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಮತ್ತು ತ್ಯಾಗದ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪ ಮಾಡಬೇಕು. ಅರಣ್ಯ ಸಿಬ್ಬಂದಿಯ ಸೇವೆಗೆ ಗೌರವ ಸಲ್ಲಿಸುವುದರ ಜೊತೆಗೆ, ಅರಣ್ಯ ನಾಶ, ಅಕ್ರಮ ಬೇಟೆ ಮತ್ತು ಅವ್ಯಾಹತವಾಗಿ ಅಕ್ರಮವಾಗಿ ಮರಗಳ ಹನನ ಮಾಡುವುದರ ವಿರುದ್ಧ ಸಮಾಜ ಜಾಗೃತವಾಗಬೇಕು ಎಂದರು.

ಹುತಾತ್ಮರ ಕುಟುಂಬಕ್ಕೆ ಇಲಾಖೆ ನೆರವಾಗಿದೆ. ಸರ್ಕಾರವೂ ಕೂಡ ಕಾನೂನು ಬದ್ಧವಾಗಿ ನೆರವಿಗೆ ಬರಲಿದೆ. ಅಂತೆಯೇ ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆಯ ಸಹಕಾರ ನಿರಂತರವಾಗಿದ್ದು, ಅಧಿಕಾರಿ-ಸಿಬ್ಬಂಧಿಗಳಲ್ಲಿ ಆತ್ಮವಿಶ್ವಾಸ ಮತ್ತು ಬಲತುಂಬುವ ಮೂಲಕ ಪ್ರಕೃತಿ ನೈಜ ರಕ್ಷಣೆಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.PES Shivamogga

ಕಾರ್ಯಕ್ರಮದಲ್ಲಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನಕೃಷ್ಣ ಪಟಗಾರ್‌ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಹುತಾತ್ಮ ಹೆಸರನ್ನು ವಾಚಿಸಿ ಸ್ಮರಿಸಿದರು. ಮೂರು ವಿಶಾಲ ತೋಪುಗಳನ್ನು ಹಾರಿಸುವ ಮೂಲಕ ಹಾಗೂ ಪುಷ್ಪಗುಚ್ಛ ಅರ್ಪಿಸುವ ಮೂಲಕ ಹುತಾತ್ಮ ಅರಣ್ಯ ಸಿಬ್ಬಂಧಿಗಳಿಗೆ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಯ ಯೋಜನೆ ಮತ್ತು ಭೂ-ಮಾಪನ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ., ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ನಿಖಿಲ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌, ಸೇರಿದಂತೆ ಅರಣ್ಯ ಇಲಾಖೆಯ ವಿವಿಧ ವೃಂದದ ಅಧಿಕಾರಿ-ಸಿಬ್ಬಂಧಿಗಳು, ಹುತಾತ್ಮರ ಕುಟುಂಬದ ಸದಸ್ಯರು, ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Forest Department officerShivamoggaಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರ್ಕಾರಿ ಶಾಲೆ, ಮೆಗ್ಗಾನ್ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ

Next Post

ಡ್ಯಾನ್ಸ್ ಫ್ಲೋರ್‌ನಲ್ಲಿ ತಾಯಂದಿರ ಮ್ಯಾಜಿಕ್: ಶುರುವಾಗ್ತಿದೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್–ಸೂಪರ್ ಮಾಮ್’

kalpa News

kalpa News

Next Post
Dance Karnataka Dance Super Mom Show Starts Sept 12

ಡ್ಯಾನ್ಸ್ ಫ್ಲೋರ್‌ನಲ್ಲಿ ತಾಯಂದಿರ ಮ್ಯಾಜಿಕ್: ಶುರುವಾಗ್ತಿದೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್–ಸೂಪರ್ ಮಾಮ್’

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL