ಕಲ್ಪ ಮೀಡಿಯಾ ಹೌಸ್ | ಸಾಗರ |
ಆನಂದಪುರ ವೃತ್ತದ ಬಳಿಯಲ್ಲಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇಂದು ಮುಂಜಾನೆ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರೂ ಅಪಘಾತದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶಿವಮೊಗ್ಗದಿಂದ ಸಾಗರಕ್ಕೆ ಚಲಿಸುತ್ತಿದ್ದ ಖಾಸಗಿ ಎರ್ಟಿಗಾ ಕಾರು ಹಾಗೂ ಸಾಗರದಿಂದ ಶಿವಮೊಗ್ಗ ಕಡೆದ ಚಲಿಸುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಮೃತರಿಬ್ಬರೂ ದೊಡ್ಡಬಳ್ಳಾಪುರ ಮೂಲದವರು ಎಂದು ಹೇಳಲಾಗಿದ್ದು, ಅಧಿಕೃತ ಮಾಹಿತಿ ಇನ್ನೂ ತಿಳಿದುಬಂದಿಲ್ಲ.
Also read: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟ | ವಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ
ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post