ಕಾರ್ತಿಕ ಮಾಸದ ಏಕಾದಶಿ ಶನಿವಾರ ಬಂದಿದ್ದರಿಂದ, ದೇವರ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯ ಭಕ್ತರು ಸೇರಿದ್ದರು. ಈ ಸಮಯದಲ್ಲಿ, ಜನಸಂದಣಿ ಹೆಚ್ಚಾದ ಕಾರಣ ಕಾಲ್ತುಳಿತ ಇದ್ದಕ್ಕಿದ್ದಂತೆ ಹೆಚ್ಚಾಯಿತು. ಕಾಲ್ತುಳಿತದಲ್ಲಿ ಅನೇಕ ಭಕ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ, ದೇವಾಲಯದ ಸುತ್ತಮುತ್ತ ತೀವ್ರ ಉದ್ವಿಗ್ನತೆ ಉಂಟಾಗಿದೆ. ಘಟನೆ ನಡೆದ ದೇವಾಲಯಕ್ಕೆ ಪೊಲೀಸರು ತಲುಪಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ಕುರಿತಂತೆ ಮಾತನಾಡಿರುವ ಸಿಎಂ ಚಂದ್ರಬಾಬು ನಾಯ್ಡು, ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತ ಘಟನೆ ಆಘಾತವನ್ನುಂಟು ಮಾಡಿದೆ. ಈ ದುರಂತ ಘಟನೆಯಲ್ಲಿ ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರಿಗೆ ತ್ವರಿತ ಮತ್ತು ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದಿದ್ದಾರೆ.
ದೇವಸ್ಥಾನದ ಆವರಣದಲ್ಲಿ ಭಕ್ತರ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭಯಾನಕ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















