ಸಾಗರ: ಇಡಿಯ ಕ್ಷೇತ್ರದಲ್ಲಿ ಜನಮಾನಸದಲ್ಲಿ ನೆಲೆಸಿರುವ ಜನಾನುರಾಗಿ ಶಾಸಕ ಎಚ್. ಹಾಲಪ್ಪ ಅವರನ್ನು ಎಂಎಸ್’ಐಎಲ್ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಈ ಕುರಿತಂತೆ ನಿಗಮ ಮಂಡಳಿ ಅಧ್ಯಕ್ಷರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಂಎಸ್’ಐಎಲ್ ಅಧ್ಯಕ್ಷರನ್ನಾಗಿ ಹಾಲಪ್ಪನವರನ್ನು ಆಯ್ಕೆ ಮಾಡುವ ಮೂಲಕ ಮಲೆನಾಡು ಭಾಗಕ್ಕೆ ಮತ್ತೊಂದು ಕೊಡುಗೆ ನೀಡಿದ್ದಾರೆ.
ಸಾಗರ ಶಾಸಕರಾಗಿ ಆಯ್ಕೆಯಾದ ನಂತರ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವವನ್ನು ಆರಂಭಿಸಿದ ಹಾಲಪ್ಪನವರು, ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಿದ್ದಾರೆ. ಇನ್ನು, ಕೊರೋನಾ ಹಾವಳಿ ಆರಂಭವಾದ ನಂತರ ಕ್ಷೇತ್ರದ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ನಿರಂತರವಾಗಿ ಸಭೆಗಳನ್ನು ನಡೆಸುತ್ತಾ ವೈರಸ್ ಹರಡುವಿಕೆಗೆ ತಡೆಗಟ್ಟುವಲ್ಲಿ ಬಹಳಷ್ಟು ಯಶಸ್ವಿಯಾಗಿದ್ದಾರೆ. ಇಂತಹ ನಾಯಕರಿಗೆ ಈ ಎಂಎಸ್’ಐಎಲ್ ಅಧ್ಯಕ್ಷಗಿರಿ ಒಲಿದುಬಂದಿರುವುದು ಕ್ಷೇತ್ರದ ಜನತೆಯಲ್ಲಿ ಸಂತಸ ಮೂಡಿಸಿದೆ.
Discussion about this post