ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರತ ಕೇವಲ ಒಂದು ರಾಷ್ಟ್ರವಲ್ಲ. ಭಾವ ರಾಗ ತಾಳಗಳ ಮಿಳಿತ ಎಂದು ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ಬಟ್ಟೆಮಲ್ಲಪ್ಪದಲ್ಲಿ ಸ್ವಾತೋಂತ್ರ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ಬಟ್ಟೆಮಲ್ಲಪ್ಪ – ಈಸೂರು – ಸಾಗರ ತನಕ ಬುಲೆಟ್ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.
ಮನೆಮನೆಯೊಳಗೂ ರಾಷ್ಟ್ರ ಧ್ವಜವನ್ನು ಕಟ್ಟಬೇಕು ಎಂಬ ಪ್ರಧಾನಿ ಮೋದಿಯವರ ಸಂದೇಶ ಯಶಸ್ವಿಯಾಗಿ ಅನುಷ್ಠಾನವಾಗುತ್ತಿದೆ. ನಾವೆಲ್ಲ ಅಂದಿನ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಆದರೆ 75ನೇ ವರ್ಷದ ಸಂಭ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿರುವುದು ಧನ್ಯರಾಗುವಂತೆ ಮಾಡಿದೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ ಮಾತನಾಡಿ, ಜಾತಿ ಮತ ಪಕ್ಷಗಳನ್ನು ಮೀರಿ ಎಲ್ಲರೂ ಅಮೃತೋತ್ಸವದಲ್ಲಿ ಭಾಗಿಯಾಗುತ್ತಿರುವುದು ದೇಶದ ಐಕ್ಯತೆ ಮತ್ತು ಸಾರ್ವಭೌಮತೆಯ ಸಂಕೇತವಾಗಿದೆ ಎಂದರು.
ತಾಲೂಕು ಯುವ ಮೋರ್ಚಾ ನಿತಿನ್ ನಗರ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಸ್ವಾಮಿ, ಜಿಪಂ ಮಾಜಿ ಸದಸ್ಯ ಸುರೇಶ ಸ್ವಾಮಿರಾವ್, ಎಂಸಿಎ ನಿರ್ದೇಶಕ ಹೆಚ್.ಆರ್. ತೀರ್ಥೇಶ್, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಮನೋಧರ ವೀರಭದ್ರ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಿನ್ಮಯ್ ಶಿಕಾರಿಪುರ, ಸಾಗರ ಯುವಮೋರ್ಚಾ ಅಧ್ಯಕ್ಷ ರವಿ ಕುಗ್ವೆ,ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂತೋಷ್, ಉದ್ಯಮಿ ರವಿಕುಮಾರ್ ಮತ್ತು ಗ್ರಾಮ ಪಂಚಾಯತಿ ಸದಸ್ಯ ರಾಘವೇಂದ್ರ ಪುರಪ್ಪೆಮನೆ, ಶ್ರೀಕರ, ರವಿ ಬಸರಾಣಿ, ರಾಜೇಶ ಹಿರಿಮನೆ ಮತ್ತು ಯುವ ಮೋರ್ಚಾ ಪದಾಧಿಕಾರಿಗಳು, ತಾಲೂಕು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post