ಕಲ್ಪ ಮೀಡಿಯಾ ಹೌಸ್
ಸಾಗರ: ತಾಲೂಕು ರೈಲು ನಿಲ್ದಾಣದಲ್ಲಿ ತಾಳಗುಪ್ಪ – ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಯುವಕ ಒಂದು ಕಾಲು ಕಳೆದುಕೊಂಡಿರುವ ಘಟನೆ ಇಂದು ನಡೆದಿದೆ.
ಕಾಲು ಕಳೆದುಕೊಂಡಿರುವ ನವೀನ್ (18) ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕವಚೂರು ಗ್ರಾಮದವರಾಗಿದ್ದು, ಪ್ಲಾಟ್ ಫಾರ್ಮ್ ಜಾರಿದ ಪರಿಣಾಮ ನವೀನ್ ಕೆಳಗೆ ಬಿದ್ದಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post