ಕಲ್ಪ ಮೀಡಿಯಾ ಹೌಸ್
ಸಾಗರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಾಗರ ಶಾಖೆ ವತಿಯಿಂದ ಇಂದು ವಿದ್ಯಾರ್ಥಿಗಳ ಬಸ್ ಸಮಸ್ಯೆ ಹಾಗೂ ಗ್ರಾಮೀಣ ಭಾಗದ ನೆಟ್‌ವರ್ಕ್ ಸಮಸ್ಯೆಯನ್ನು ಬಗೆಹರಿಸಬೇಕೆಂದು ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಅಭಿಷೇಕ ಶೆಟ್ಟಿ ಹಾಗೂ ಕಾರ್ಯಕರ್ತರಾದ ಅಕ್ಷಯ್, ಪ್ರೀತಮ್, ಕೌಶಿಕ್ ಸಂಜೀವ, ಮದನ್, ರಿತೇಶ್, ನಿತೇಶ್, ಸುಮಂತ, ಸಂದೀಪ್, ನಿತಿನ್, ಅಭಿ ರಾಯ್ಕರ್, ಕೃತಿ ಜೋಯಿಸ್, ಶಿಲ್ಪ ಇನ್ನಿತರರು ಹಾಜರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















