ಕಲ್ಪ ಮೀಡಿಯಾ ಹೌಸ್ | ಸಾಗರ |
ನಗರಸಭೆ ವ್ಯಾಪ್ತಿಯ ಎಸ್ ಎನ್ ನಗರದ ಕಂಬಳಿಕೂಪ್ಪದ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರ ನೇರ ದೂರು ಬಂದ ಹಿನ್ನೆಲೆಯಲ್ಲಿ ಶಾಸಕ ಹರತಾಳು ಹಾಲಪ್ಪ ದಿಢೀರ್ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳ ಬಗ್ಗೆ ಹಾಗೂ ಅವಶ್ಯಕತೆಗಳ ಬಗ್ಗೆ ಮಾಹಿತಿ ಪಡೆದರು.
ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ನಾಲ್ಕೈದು ದಿನಗಳಿಂದ ವಸತಿ ನಿಲಯದ ಹೆಣ್ಣು ಮಕ್ಕಳು ಕರೆ ಮಾಡಿ ಹಾಸ್ಟೆಲಿನಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇದೆ ಎಂದು ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಭೇಟಿ ನೀಡಿದ್ದೇನೆ. ಇಲ್ಲಿ ಬಂದು ವಿದ್ಯಾರ್ಥಿನಿಗಳಿಂದ ಮಾಹಿತಿ ಪಡೆದ ಸಂದರ್ಭದಲ್ಲಿ ಆಹಾರದ ಗುಣಮಟ್ಟದಲ್ಲಿ ಕೊರತೆ ಇದೆ. ನೀರಿನ ಸಮಸ್ಯೆ ಇದೆ ಎಂದು ತಿಳಿಸಿದ್ದಾರೆ.
ನೌಕರರ ಸಮಸ್ಯೆ ಇದೆ,ಗೋಧಿ ಹಿಟ್ಟು ಸರಿಯಿಲ್ಲ ಎಂದು ತಿಳಿಸಿದ್ದಾರೆ. ತಕ್ಷಣ ಅಧಿಕಾರಿಗಳ ಜೋತೆ ಸಭೆ ನಡೆಸಿ ಸರಿಪಡಿಸಲಾಗುವುದು, ಹಾಗೂ ವಿದ್ಯಾರ್ಥಿಗಳಿಗೆ ನೀಡುವ ಕಿಟ್ ಗಳಲ್ಲಿ ಸರಿಯಾಗಿ ವಸ್ತು ಗಳು ಬರುತ್ತಿಲ್ಲ ಎಂದು ದೂರಿದ್ದಾರೆ. ವಿದ್ಯಾರ್ಥಿನಿಯರು ತಿಳಿಸಿದ ಎಲ್ಲಾ ಸಮಸ್ಯೆಗಳನ್ನೂ ಅತಿ ಶೀಘ್ರದಲ್ಲಿ ಸರಿಪಡಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಾಗರ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ನಗರಸಭೆ ಉಪಾಧ್ಯಕ್ಷ ವಿ. ಮಹೇಶ್, ಕೆ. ಆರ್. ಗಣೇಶ್ ಪ್ರಸಾದ್. ಸ್ಥಳೀಯ ನಗರ ಸಭೆ ಸದಸ್ಯ ಲಿಂಗರಾಜು, ಸಾಗರ ಉಪ ವಿಭಾಗ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯ ವಿನೋದ್ ರಾಜ್ , ರವಿ ಮೊದಲಾದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post