ಕಲ್ಪ ಮೀಡಿಯಾ ಹೌಸ್ | ಸಾಗರ |
ಅತಿ ಕಿರಿಯ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನಕ್ಕೆ ತಾಲ್ಲೂಕಿನ ಆನಂದಪುರದಲ್ಲಿ ಸಂಪೂರ್ಣ ಬಂದ್ ಮಾಡಲಾಯಿತು. ಅಂಗಡಿ ಗ್ರಾಹಕರು ಹೋಟೆಲ್ ಉದ್ಯಮಿಗಳು ಸ್ವಯಂಪ್ರೇರಿತರಾಗಿ ಬಂದ್ ಮಾಡುವುದರ ಮೂಲಕ ಕನ್ನಡದ ರಣವಿಕ್ರಮನಿಗೆ ಅಂತಿಮ ನಮನ ಸಲ್ಲಿಸಿದರು.
ಬಸ್ ಸ್ಟ್ಯಾಂಡ್ ಆವರಣದಲ್ಲಿ ಕಟೌಟ್ ನ ಮುಂಭಾಗದಲ್ಲಿ ಮೌನಾಚರಣೆಯನ್ನು ನಡೆಸುವುದರೊಂದಿಗೆ ಆನಂದಪುರದ ಮುಖ್ಯರಸ್ತೆಯಲ್ಲಿ ಶಾಂತಿ ಮೆರವಣಿಗೆಯೊಂದಿಗೆ ಅಗಲಿದ ನಾಯಕನಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕನ್ನಡದ ಕುವರ ವರನಟ ಡಾಕ್ಟರ್ ರಾಜ್ ಕುಮಾರ್ ಅವರ ಕಿರಿಯ ಪುತ್ರ ದೊಡ್ಮನೆ ಹುಡುಗ ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಇಡೀ ಕರುನಾಡಿಗೆ ಇದೀಗ ನೋವನ್ನುಂಟು ಮಾಡಿದೆ. ಅಪಾರ ಅಭಿಮಾನಿಗಳನ್ನು ಹೊಂದಿದ್ದ ಪುನೀತ್ ರಾಜ್ ಕುಮಾರ್ ಅವರ ನಿಧನವನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಗೆ ಇಂದು ಕರುನಾಡು ಬಂದಿದೆ.
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರತ್ನಾಕರ ಹೊನಗೋಡು ಮತ್ತು ಇತರ ಮುಖಂಡರುಗಳ ತಂಡದೊಂದಿಗೆ ಈ ಬಂದ್ ಯಶಸ್ವಿಯಾಗಿ ನೆರವೇರಿತು.
ವರದಿ :ಪವನ್ ಕುಮಾರ್ ಕಠಾರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post