ಕಲ್ಪ ಮೀಡಿಯಾ ಹೌಸ್ | ಸಾಗರ |
ನೀರಿನ ಮಟ್ಟ ಇಳಿಕೆಯಾದ ಹಿನ್ನೆಲೆ ಹಸಿರುಮಕ್ಕಿ ಲಾಂಚ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶರಾವತಿ ಹಿನ್ನೀರು ಭಾಗದ ಮತ್ತೊಂದು ಲಾಂಚ್ ಸೇವೆ ಸ್ಥಗಿತಗೊಂಡಿದೆ.
ಬೇಸಿಗೆ ಕಾರಣಕ್ಕೆ ಶರಾವತಿ ಹಿನ್ನೀರು ಭಾಗದಲ್ಲಿ ನೀರಿನ ಮಟ್ಟ ಕುಸಿತವಾಗಿದೆ. ನೀರಿನ ಆಳದಲ್ಲಿದ್ದ ಮರದ ದಿಮ್ಮಿಗಳು ಮೇಲೆ ಬರಲು ಆರಂಭವಿಸಿವೆ. ಇವುಗಳು ಲಾಂಚ್‌ಗೆ ತಾಗಿ ಹಾನಿ ಉಂಟು ಮಾಡುವ ಸಾಧ್ಯಗಳಿದ್ದು, ಲಾಂಚ್ ಸೇವೆಯನ್ನು ತಾತ್ಕಾಲಿಕ ಅವಧಿಗೆ ಸ್ಥಗಿತಗೊಳಿಸಲಾಗಿದೆ. ಮಳೆ ಬಂದು ನೀರಿನ ಮಟ್ಟ ಹೆಚ್ಚಳವಾಗುವವರೆಗೆ ಹಸಿರುಮಕ್ಕಿ ಲಾಂಚ್ ಸೇವೆ ಇರುವುದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post