ಕಲ್ಪ ಮೀಡಿಯಾ ಹೌಸ್ | ಸಾಗರ |
ಮಳೆಗಾಲ ಆರಂಭವಾಗುವ ಸನಿಹದಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಪಾಯಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಎಚ್. ಹಾಲಪ್ಪ MLA Halappa ಸೂಚನೆ ನೀಡಿದರು.
ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿ ಮಾತನಾಡಿದ ಅವರು, ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ರಸ್ತೆ ಬದಿಯಲ್ಲಿ ಅಪಾಯಕ್ಕೆ ಎಡೆಮಾಡಿಕೊಡುವ ಮರದ ಕೊಂಬೆಗಳನ್ನು ತೆರವುಗೊಳಿಸಬೇಕು. ಚರಂಡಿಗಳ ದುರಸ್ಥಿ ಕಾರ್ಯ ಕೈಗೊಳ್ಳಬೇಕು, ರೈತರಿಗೆ ಸೂಕ್ತ ಸಮಯದಲ್ಲಿ ದಪ್ಪ ಅಭಿಲಾಶ ಭತ್ತ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.
ನಗರದ ಮಾರ್ಕೆಟ್ ರಸ್ತೆ, ಕೆಳದಿ ರಸ್ತೆ ಅಗಲೀಕರಣ, ನಗರೋತ್ತಾನ ಅನುದಾನದಲ್ಲಿ ನಡೆಯಬೇಕಾದ ಅಭಿವೃದ್ಧಿ ಕಾಮಗಾರಿಗಳು, ಶಾಲೆಗಳ ದುರಸ್ಥಿ, ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳುವ ಬಗ್ಗೆ ಹಾಗೂ ಗಣಪತಿ ಕೆರೆ ಸೌಂದರ್ಯಕರಣಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿದ್ದು ಸೂಕ್ತ ಕಾಮಗಾರಿ ನೆಡೆಸುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Also read: ಕುವೆಂಪು ವಿವಿ ಘಟಿಕೋತ್ಸವ: ಅತಿ ಹೆಚ್ಚು ಸ್ವರ್ಣ ಪದಕ ಪಡೆದ ಸಾಧಕ ವಿದ್ಯಾರ್ಥಿನಿಯರಿವರು
ಇಒ, ಬಿಇಒ, ವಿವಿಧ ಇಲಾಖೆಗಳ ಅಭಿಯಂತರರು, ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post