ಕಲ್ಪ ಮೀಡಿಯಾ ಹೌಸ್ | ಸಾಗರ |
ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಗಾಂಧಿನಗರ ಸರ್ಕಲ್‌ನಲ್ಲಿ ನಡೆದಿದೆ.
ನಗರದ ಗಾಂಧಿನಗರ ಸರ್ಕಲ್ ನಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ವೇಗದಿಂದ ಬಂದ ಬೈಕ್ವೊಂದು ಡಿಕ್ಕಿ ಹೊಡೆದಿದ್ದು, ಗುದ್ದಿದ ರಭಸಕ್ಕೆ ಬೈಕ್ನ ಮುಂಭಾಗ ನುಜ್ಜುಗುಜ್ಜಾಗಿದೆ.
ಘಟನೆಯಲ್ಲಿ ಮೂವರಿಗೆ ಗಾಯವಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಘಟನೆ ಬೆನ್ನಲ್ಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮುಂದುವರೆಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















