No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಕರುಣೆ – ಆಯುಧಾ ಎರಡೂ ದೇವಿಯಲ್ಲಿದೆ: ರಾಮಚಂದ್ರಾಪುರ ಶ್ರೀ

ಪುರಾಣ ಕಥೆಗಳು ಕಾಗಕ್ಕಾ ಗುಬ್ಬಕ್ಕ ಕಥೆಗಳಲ್ಲ | ಸಂಸದ ಕಾಗೇರಿ ಸೇರಿ ಹಲವಾರು ಗಣ್ಯರು ಭಾಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 30, 2025
in ಸಾಗರ
0
ಕರುಣೆ – ಆಯುಧಾ ಎರಡೂ ದೇವಿಯಲ್ಲಿದೆ: ರಾಮಚಂದ್ರಾಪುರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ದೇವಿಯಲ್ಲಿ ಸಹಜಾನಂದದ ಪ್ರತೀಕವಾದ ಕರುಣೆಯ ಮಂದಹಾಸವೂ ಇದೆ. ವಿವಿಧ ರೀತಿಯ ಆಯುಧಗಳನ್ನು ದೇವಿ ಧರಿಸಿದ್ದಾಳೆ. ನಾವು ಭಂಡಾಸುರರಾದರೆ ದೇವಿ ಆಯುಧ ಪ್ರಯೋಗ ಮಾಡುತ್ತಾಳೆ. ನಾವು ಪುಣ್ಯದ ದಾರಿಯಲ್ಲಿ ಸಾಗಿದರೆ ದೇವಿಯ ಕರುಣೆಗೆ ಪಾತ್ರರಾಗುತ್ತೇವೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಸಾಗರದ ಶ್ರೀ ರಾಘವೇಶ್ವರ ಭವನದಲ್ಲಿ ನಡೆಯುತ್ತಿರುವ ‘ನವರಾತ್ರ ನಮಸ್ಯಾ’ ದ ಏಳನೇ ದಿನ ಲಲಿತೋಪಾಖ್ಯಾನ ಪ್ರವಚನ ಮಾಲಿಕೆಯಲ್ಲಿ ಆಶೀರ್ವಚನ ನೀಡಿದರು. ನಮ್ಮ ನಡೆ ನುಡಿಗಳು ನಾವು ದೇವಿಯ ಕರುಣಾಪೂರಿತ ಅನುಗ್ರಹಕ್ಕೆ ನಾವು ಪಾತ್ರರೋ ಅಥವಾ ದೇವಿಯ ಆಯುಧಾಘಾತಕ್ಕೆ ನಾವು ಅರ್ಹರೋ ಎಂದು ನಿರ್ಧರಿಸುತ್ತದೆ ಎಂದು ಮಾರ್ಮಿಕವಾಗಿ ಹೇಳಿದ ಶ್ರೀಗಳು, ಇಂದಿನ ವಿಜ್ಞಾನವನ್ನು ಓದಿದವರು ನಮ್ಮ ಪುರಾಣ ಕಥೆಗಳನ್ನು ಕಾಗಕ್ಕಾ ಗುಬ್ಬಕ್ಕನ ಕಥೆ ಎಂದು ಭಾವಿಸಬಹುದು. ಆದರೆ ನಮ್ಮ ಋಷಿ ಮುನಿಗಳು ಜ್ಞಾನ ದೃಷ್ಟಿಯಲ್ಲಿ ಅವುಗಳನ್ನು ಕಂಡುಕೊಂಡಿದ್ದಾರೆ. ನಾವು ಆ ಜ್ಞಾನ ದೃಷ್ಟಿಯಲ್ಲಿ ನಮ್ಮ ಪುರಾಣಾದಿಗಳನ್ನು ಗಮನಿಸಿದಾಗ ಅವುಗಳ ಒಳಮರ್ಮದ ಅರಿವಾಗುತ್ತದೆ ಎಂದರು.
ಪ್ರಕೃತಿ ಒಳಿತು ಹಾಗೂ ಕೆಡುಕು ಎರಡರ ಸೂಚನೆಯನ್ನು ನೀಡುತ್ತದೆ. ಗ್ರಹ – ನಕ್ಷತ್ರಗಳ ಮೂಲಕ, ನಮ್ಮ ದೇಹದ ಮೂಲಕ ಮತ್ತು ಶಕುನಗಳ ಮೂಲಕ ಮೂರು ರೀತಿಯಲ್ಲಿ ಪ್ರಕೃತಿ ಮುಂದಿನ ಸೂಚನೆಯನ್ನು ನೀಡುತ್ತದೆ. ಅದನ್ನು ಅರಿತಾಗ ನಾವು ಮುಂದಿನ ದಿನಗಳನ್ನು ಇಂದೇ ಕಾಣಬಹುದು ಎಂದು ಅಭಿಪ್ರಾಯಪಟ್ಟರು.

ಲಲಿತಾ ದೇವಿ ಹಾಗೂ ಭಂಡಾಸುರನ ಯುದ್ಧದ ಸನ್ನಿವೇಶಗಳ ಬಗ್ಗೆ ವಿವರಿಸಿದ ಶ್ರೀಗಳು, ಅಂದಿನ ಯುದ್ಧ ತಂತ್ರಗಳು ಹಾಗೂ ಯುದ್ಧೋಪಕರಣಗಳು ವೈರಿಗೂ ಕೂಡ ಮುಕ್ತಿಗೆ ದಾರಿ ತೋರಿಸುವಂತಿದ್ದವು. ಆದರೆ ಇಂದಿನ ಯುದ್ಧಾಯುಧಗಳು ಸಮೂಹ ನಾಶಕವಾಗಿದ್ದು, ಜೀವ ಸಂಕುಲಕ್ಕೆ ಮಾರಕವಾಗಿವೆ ಎಂದು ವಿವರಿಸಿದರು.
ಉತ್ತರ ಕನ್ನಡದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿಮುಲ್ ಅಧ್ಯಕ್ಷ ವಿದ್ಯಾಧರ ಗುರುಶಕ್ತಿ, ಸಾಗರ ನಗರ ಸಭಾ ಅಧ್ಯಕ್ಷೆ ಮೈತ್ರಿ ಪಾಟೀಲ್, ಮಾಜಿ ಅಧ್ಯಕ್ಷ ಟಿ.ಡಿ. ಮೇಘರಾಜ್, ಶಿವಮೊಗ್ಗ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮಠದ ಶಾಸನತಂತ್ರದ ಅಧ್ಯಕ್ಷರಾದ ಮೋಹನ ಭಾಸ್ಕರ ಹೆಗಡೆ, ಕಾರ್ಯದರ್ಶಿ ಕೃಷ್ಣಪ್ರಸಾದ್ ಎಡಪ್ಪಾಡಿ, ಹವ್ಯಕ ಮಹಾಮಂಡಲದ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ ಮುಂತಾದವರು ಉಪಸ್ಥಿತರಿದ್ದರು ಶ್ರೀಗಳಿಗೆ ಫಲ ಸಮರ್ಪಿಸಿದರು.

ಇದಕ್ಕೂ ಮುನ್ನ ನವರಾತ್ರ ನಮಸ್ಯಾ ಸಮಿತಿಯಿಂದ ಕೊಡ ಮಾಡಿದ ಸಮಾಜ ಗೌರವವನ್ನು ಜೈನ ಸಮಾಜ, ವಿಷ್ಣು ಸಮಾಜ, ಜೈನ ದಿಗಂಬರ ಸಮಾಜ, ಆರ್ಯ ವೈಶ್ಯ ಸಮಾಜ, ಕುರುಬ ಸಮಾಜ ಹಾಗೂ ಮಾರಿಕಾಂಬಾ ಸಮಿತಿಯವರಿಗೆ ಕೊಡಲಾಯಿತು. ಆಯಾ ಸಮಾಜದ ಪರವಾಗಿ ಅಧ್ಯಕ್ಷರಾದ ಚಗನ್ ಜಿ. ಲಾಲ್, ಭಿಮ್ ಸಿಂಗ್, ಹೊಯ್ಸಳ, ಸೂರ್ಯನಾರಾಯಣ, ಹನುಮಂತಪ್ಪ ಹಾಗೂ ನಾಗೇಂದ್ರ ಗೌರವ ಸ್ವೀಕರಿಸಿದರು.
ನವರಾತ್ರ ನಮಸ್ಯಾ ಸಮಿತಿಯ ಪ್ರಧಾನ ಸಂಚಾಲಕ ಮುರಳಿ ಗೀಜಗಾರು, ಅಧ್ಯಕ್ಷ ಗುರುಮೂರ್ತಿ ಹೆಗಡೆ ಕಲ್ಸೆಮನೆ, ಹವ್ಯಕ ಮಹಾಮಂಡಲದ ಮುಷ್ಟಿ ಭಿಕ್ಷಾ ಪ್ರಧಾನೆ ರುಕ್ಮಾವತಿ ರಾಮಚಂದ್ರ, ರಾಮಚಂದ್ರಾಪುರ ಮಂಡಲದ ಉಪಾಧ್ಯಕ್ಷ ರಮೇಶ್ ಕಾನುಗೋಡು, ನವರಾತ್ರ ನಮಸ್ಯಾದ ಸುವಸ್ತು ಸಂಚಾಲಕ ಪ್ರಕಾಶ್ ಭಾಗಿ, ಪುರಪ್ರವೇಶ ಸಂಚಾಲಕ ಗಣೇಶ್ ಪ್ರಸಾದ್, ಪ್ರಧಾನ ಮಠದ ಪುನರ್ನಿರ್ಮಾಣ ಸಮಿತಿಯ ಗಣಪತಿ ಜಟ್ಟಿಮನೆ, ಸಮಾಜದ ಪ್ರಮುಖರಾದ ಯು.ಹೆಚ್. ರಾಮಪ್ಪ, ಮಹಾಮಂಡಲದ ಪ್ರಧಾನ ರಮೇಶ್ ಹೆಗಡೆ ಗುಂಡೂಮನೆ, ಶ್ರೀನಾಥ ಸಾರಂಗ, ಗೌತಮ ಮತ್ತಿತರರು ಇದ್ದರು.

ಇದಕ್ಕೂ ಮುನ್ನ ಬೆಳಗ್ಗೆ ಚಂಡಮುಂಡಹಾ ಉಪಾಸನೆ, ಶ್ರೀಸೂಕ್ತ ಹವನ, ಚಂಡಿಕಾ ಹವನ, ಶ್ರೀಪೂಜೆ, ಕುಂಕುಮಾರ್ಚನೆ, ಉಡಿ ಹಾಗೂ ಸ್ತೋತ್ರ ಸಮರ್ಪಣೆ, ಸುವರ್ಣ ಪಾದುಕಾ ಪೂಜೆ, ಭಜನೆ, ಲಲಿತಾ ಅಷ್ಟೋತ್ತರ ನಡೆಯಿತು. ಸಂಜೆ ದುರ್ಗಾದೀಪ ನಮಸ್ಕಾರ, ರಾಜರಾಜೇಶ್ವರಿ ಪೂಜೆ ಹಾಗೂ ಚಂಡಿಕಾ ಪಾರಾಯಣ ನೆರವೇರಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSagaraShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಾಗರ
Share196Tweet123Send
Previous Post

Subbaiah Research Institute Launches STRI with Framework Development Meet

Next Post

ಮೌಲ್ಯವಿಲ್ಲದಿದ್ದರೆ ಸಮಾಜಕ್ಕೆ ಹೃದಯವೇ ಇಲ್ಲದಂತೆ: ನಿ.ನ್ಯಾಯಮೂರ್ತಿ ನಾಗಮೋಹನ್ ದಾಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೌಲ್ಯವಿಲ್ಲದಿದ್ದರೆ ಸಮಾಜಕ್ಕೆ ಹೃದಯವೇ ಇಲ್ಲದಂತೆ: ನಿ.ನ್ಯಾಯಮೂರ್ತಿ ನಾಗಮೋಹನ್ ದಾಸ್

ಮೌಲ್ಯವಿಲ್ಲದಿದ್ದರೆ ಸಮಾಜಕ್ಕೆ ಹೃದಯವೇ ಇಲ್ಲದಂತೆ: ನಿ.ನ್ಯಾಯಮೂರ್ತಿ ನಾಗಮೋಹನ್ ದಾಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL