ಕಲ್ಪ ಮೀಡಿಯಾ ಹೌಸ್ | ಸಾಗರ |
ಡೆಂಗ್ಯೂ ಜ್ವರ ಶಂಕೆ 5 ವರ್ಷದ ಬಾಲಕ ಬಲಿಯಾದ ಘಟನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ.
ಜನ್ನತ್ ನಗರದ ಮಹಮ್ಮದ್ ನಯಾನ್ (5) ಮೃತ ಬಾಲಕ. ಕಳೆದ ಐದು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಈತನನ್ನು ಸ್ಥಳೀಯ ವೈದ್ಯರ ಬಳಿ ಕರೆದುಕೊಂಡು ಚಿಕಿತ್ಸೆ ನೀಡಲಾಯಿತು.
Also read: ನಾನು ಗುತ್ತಿಗೆದಾರನೂ ಅಲ್ಲ, ಮೇಸ್ತ್ರಿಯೂ ಅಲ್ಲ | ಶಾಸಕ ಆರಗ ಜ್ಞಾನೇಂದ್ರ ಹೀಗೆ ಹೇಳಿದ್ದೇಕೆ?

ಚಿಂತಾಜನಕ ಸ್ಥಿತಿಯಲ್ಲಿದ್ದಾಗ ಶುಕ್ರವಾರ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಅಯಾನ್ ಶನಿವಾರ ಬೆಳಗ್ಗೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post