ಕಲ್ಪ ಮೀಡಿಯಾ ಹೌಸ್ | ಸಾಗರ |
ಇಲ್ಲಿನ ಸಣ್ಣಮನೆ ಸೇತುವೆ ಬಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಲಾರಿಯೊಂದು ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಿಸಿಎಂ ಹಾಸ್ಟೆಲ್’ನಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ತೆರಳಿತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಜೋಗದ ಕಡೆಯಿಂದ ಬಂದ ಟ್ರಿಪ್ಪರ್ ಹರಿದಿದೆ. ಪರಿಣಾಮವಾಗಿ ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯಗಳಾಗಿದ್ದು, ಓರ್ವಳ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಶಿಕಾರಿಪುರದವರಾದರೆ ಓರ್ವಳು ಸೊರಬದ ವಿದ್ಯಾರ್ಥಿನಿಯಾಗಿದ್ದಾಳೆ. ನಿರ್ಲಕ್ಷದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.
ಸಾಗರ ಟೌನ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post