ಕಲ್ಪ ಮೀಡಿಯಾ ಹೌಸ್
ಸಾಗರ: ವಿಶ್ವವಿಖ್ಯಾತ ಜೋಗ ಜಲಪಾತ ನೋಡಲು ಬರುವ ಪ್ರವಾಸಿಗರು ಕೋವಿಡ್ ನೆಗಟಿವ್ ದೃಢೀಕರಣ ಪತ್ರ ಹಾಜರುಪಡಿಸಬೇಕಿಲ್ಲ ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ಕಾರ್ಯದರ್ಶಿ ಎಚ್. ಸ್. ರಾಮಕೃಷ್ಣ ತಿಳಿಸಿದರು.
ಜಾಗೃತಿ ಮೂಡಿಸುವ ಉದ್ದೇಶದಿಂದ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರಲ್ಲಿ ಲಸಿಕೆ ಹಾಕಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಪ್ರಾಧಿಕಾರದ ಪ್ರಧಾನ ದ್ವಾರದಲ್ಲಿ ಪರಿಶೀಲಿಸಲಾಗುವುದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಂಡಿರಬೇಕು. ಕನಿಷ್ಠ, ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿರಲೇಬೇಕು. ತಪ್ಪಿದಲ್ಲಿ ಅವರಿಗೆ ಲಸಿಕೆಯ ಮಹತ್ವದ ಅರಿವು ಮೂಡಿಸಲಾಗುವುದು ಎಂದರು.
ಜೋಗದ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರವು ಉನ್ನತ ಮಟ್ಟದಲ್ಲಿ ಸಭೆ ನಡೆಸಿ ಚರ್ಚಿಸುತ್ತಿದ್ದು, ಶೀಘ್ರವೇ ನೂತನ ಯೋಜನೆಗಳ ಕಾಮಗಾರಿಗಳಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post