ಕಲ್ಪ ಮೀಡಿಯಾ ಹೌಸ್ | ಸಾಗರ |
ಪ್ರದಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೆಂದ್ರ ಸರ್ಕಾರ, ದೇಶದಲ್ಲಿ 100 ಕೋಟಿ ಜನರಿಗೆ ಕೋವಿಡ್ ಲಸಿಕೆ ತಲುಪಿಸಿದ ಹಿನ್ನಲೆಯಲ್ಲಿ, ಇಂದು ಶಾಸಕ ಹೆಚ್. ಹಾಲಪ್ಪ ಅವರು ಕಾರ್ಯಕರ್ತರೊಂದಿಗೆ ಪಟ್ಟಣದಲ್ಲಿ ಮಾನವ ಸರಪಣಿ ನಿರ್ಮಿಸುವುದರ ಮೂಲಕ, ಪಟಾಕಿ ಸಿಡಿಸಿ, ಸಂಭ್ರಮಾಚರಣೆ ನಡೆಸಿ, ಪ್ರಧಾನ ಮಂತ್ರಿಯವರಿಗೆ ಅಭಿನಂದನೆ ಸಲ್ಲಿಸಿದರು. ನಂತರ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು, ಸಾಗರ ನಗರ ಹಾಗೂ ಗ್ರಾಮಾಂತರ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ವಿವಿಧ ಹಂತದ ನಾಯಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post