ಕಲ್ಪ ಮೀಡಿಯಾ ಹೌಸ್ | ಸಾಗರ |
ಸಮೀಪದ ಹೆಗ್ಗೋಡು-ಭೀಮನಕೋಣೆಯ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘವು ಇದೇ ಜನವರಿ 17 ರಿಂದ 19 ರವರೆಗೆ ಮೂರು ದಿನಗಳ ಕಾಲ ಬೆಳಿಗ್ಗೆ 10 ರಿಂದ ಸಂಜೆ 7:30ರವರೆಗೆ ನಗರದ ಬಿ.ಎಚ್.ರಸ್ತೆಯ ಕರ್ನಾಟಕ ಸಂಘದಲ್ಲಿ ನೈಸರ್ಗಿಕ ಬಣ್ಣದ ಅಪ್ಪಟ ಹತ್ತಿ ಕೈಮಗ್ಗದ ಹಾಗೂ ಕೈಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು #Exhibition and sale of handlooms, handcrafts ಹಮ್ಮಿಕೊಂಡಿದೆ.
17ರಂದು ಬೆಳಿಗ್ಗೆ 11:30ಕ್ಕೆ ಜನಶಿಕ್ಷಣ ಸಂಸ್ಥೆ ನಿರ್ದೇಶಕಿ ಎಸ್.ವೈ.ಅರುಣಾದೇವಿ ಅವರು ಮೇಳಕ್ಕೆ ಚಾಲನೆ ನೀಡುವರು. ಅತಿಥಿಗಳಾಗಿ ಸಂಸ್ಕೃತಿ ಚಿಂತಕ ಪ್ರೊ.ರಾಜೇಂದ್ರ ಚೆನ್ನಿ ಅವರು, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಶಿವಲಿಂಗಪ್ಪ ಎನ್.ಕುಂಬಾರ, ಸಂಘಟಕಿ ಟಿ.ಗಾಯತ್ರಿ ಅವರು ಭಾಗವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರಕ ಸಂಘದ ಅಧ್ಯಕ್ಷೆ ಮಹಾಲಕ್ಷ್ಮಿ ಅವರು ವಹಿಸುವರು.
ಮೇಳದಲ್ಲಿ ಒಟ್ಟು 8 ಮಳಿಗೆಗಳು ಇರಲಿವೆ. ಚರಕದ ನೈಸರ್ಗಿಕ ಬಣ್ಣದ ಕೈಮಗ್ಗದ ಬಟ್ಟೆಗಳು, ಸಿದ್ಧಉಡುಪುಗಳು ಇರಲಿವೆ. ಗಜೇಂದ್ರಗಡದ ನೇಕಾರರ ಅಪರೂಪದ ಸೀರೆಗಳು, ಇತರೆ ಬಟ್ಟೆಗಳು ಇರಲಿವೆ. ಶಿರಸಿಯ ತೇಜಸ್ವಿನಿ ಅವರ ಸಿರಿಧಾನ್ಯದಿಂದ ತಯಾರಿಸಿದ ವೈವಿಧ್ಯಮಯ ಆಹಾರ ಉತ್ಪನ್ನಗಳು, ಧಾಮಿನಿ ನ್ಯಾಚುರಲ್ಸ್‌ಅವರ ಮಲೆನಾಡಿನ ವೈವಿಧ್ಯಮಯ ಉಪ್ಪಿನಕಾಯಿಗಳು, ಶಿರಸಿಯ ಚೇತನಾ ಸಂಸ್ಥೆಯ ಬಾಳೆನಾರಿನ ಉತ್ಪನ್ನಗಳು, ಚಿತ್ರಾ ಗಿರೀಶ್‌ಅವರ ಟೆರಾಕೋಟಾ ಉತ್ಪನ್ನಗಳು, ಮಣ್ಣಿನ ಆಭರಣಗಳು, ಗೀತಾಂಜಲಿ ಬುಕ್‌ಸೆಂಟರ್‌ನ ಪುಸ್ತಕಗಳು ಲಭ್ಯ ಇವೆ.
ಈ ಮೇಳವನ್ನು ರಾಜ್ಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಪವಿತ್ರವಸ್ತ್ರ ಯೋಜನೆಯಡಿ ಆಯೋಜಿಸಲಾಗಿದೆ. ಮಾಹಿತಿಗೆ ಮೊ: 6363885215/ 7411120862 ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















