ಕಲ್ಪ ಮೀಡಿಯಾ ಹೌಸ್ | ಸಾಗರ |
ಚಲಿಸುತ್ತಿದ್ದ ಬಸ್’ನಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರ ಸಮಯ ಪ್ರಜ್ಞೆಯ ಕಾರ್ಯದಿಂದ ದೊಡ್ಡ ಅನಾಹುತವೊಂದು ತಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರಬನದ ಬಳಿಯಲ್ಲಿ ನಡೆದಿದೆ.
ಖಾಸಗಿ ಬಸ್’ವೊಂದು ಸಿಗಂಧೂರಿನಿಂದ ಸಾಗರಕ್ಕೆ ತೆರಳುತ್ತಿತ್ತು. ಬಸ್ ಹುಲಿದೇವರಬನದ ಬಳಿ ಬಂದಾಗ ಬಸ್ ಕೆಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಗಮನಿಸಿದ ಸ್ಥಳೀಯರು ಬಸ್ಸನ್ನು ಕೂಗಿ ನಿಲ್ಲಿಸಿದ್ದಾರೆ.
ಸ್ಥಳೀಯರು ಕೂಗಿದ ಹಿನ್ನೆಲೆಯಲ್ಲಿ ಚಾಲಕ ಬಸ್ ನಿಲ್ಲಿಸಿದ್ದಾರೆ. ತಕ್ಷಣವೇ ಪ್ರಯಾಣಿಕರನ್ನು ಇಳಿಸಿ, ಬೆಂಕಿ ನಂದಿಸಿದ್ದಾರೆ.
ಸ್ಥಳೀಯರ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದೆ.
ಸಮಯಪ್ರಜ್ಞೆ ಮೆರೆದ ಗ್ರಾಮಸ್ಥರು ಹಾಗೂ ಬಸ್ ಸಿಬ್ಬಂದಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















