ಕಲ್ಪ ಮೀಡಿಯಾ ಹೌಸ್ | ಸಾಗರ |
ಪಟ್ಟಣದ ಗಾಂಧಿ ಮೈದಾನದಲ್ಲಿ ಶಾಸಕ ಹೆಚ್. ಹಾಲಪ್ಪ MLA Halappa ಹರ್ ಘರ್ ತಿರಂಗಾ ಅಭಿಯಾನದ Har Ghar Thiranga Campaign ಪೂರ್ವಭಾವಿ ಸಭೆ ನೆಡೆಸಿದರು.
ದೇಶ 75ನೇ ಸ್ವಾತಂತ್ರ್ಯ ಮಹೋತ್ಸವ ದಿನಾಚರಣೆ ಆಚರಿಸುತ್ತಿರುವ ಸಂದರ್ಭದಲ್ಲಿ ದೇಶದಲ್ಲಿ ಒಂದು ಕೋಟಿಗೂ ಹೆಚ್ಚು ರಾಷ್ಟ್ರ ಧ್ವಜಗಳನ್ನು ಹಾರಾಡಿಸಲಿದ್ದು, ಸಾಗರದಲ್ಲಿಯೂ ಸಹ “ಹರ್ ಘರ್ ತಿರಂಗಾ” ಅಭಿಯಾನದಡಿ 30 ಸಾವಿರ ಧ್ವಜಗಳನ್ನು ಹಾರಾಡಿಸು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರರು, EO, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಆಯುಕ್ತರು, BEO, ತಾ. ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post