ಕಲ್ಪ ಮೀಡಿಯಾ ಹೌಸ್ | ಸಾಗರ |
ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ #Sigandhooru Choudeshwari Temple ಭಾನುವಾರ ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಅವರು ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿ ಬಿ.ಫಾರಂಗೆ ವಿಶೇಷ ಪೂಜೆ ಸಲ್ಲಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರು ಏ.15 ರಂದು ಬೆಳಿಗ್ಗೆ 10:30ಕ್ಕೆ ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನಲೆ, ಸಿಗಂದೂರು ಚೌಡೇಶ್ವರಿ ದೇವಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು.
ಇನ್ನು, ಸಿಗಂಧೂರು ದೇವಾಲಯಕ್ಕೆ ತೆರಳುವ ದಾರಿಯಲ್ಲಿ ಲಾಂಚ್ ಮೂಲಕ ಸಂಚರಿಸಿ ನಟ ಶಿವರಾಜಕುಮಾರ್ ಶರಾವತಿ ಹಿನ್ನೀರಿನ ಸೌಂದರ್ಯ ಸವಿದು ಸಂಭ್ರಮಿಸಿದರು.
Also read: ರಸ್ತೆ ಅಪಘಾತದಲ್ಲಿ ಮೃತಪಟ್ಟ ನಂಜುಂಡಪ್ಪ ಮನೆಗೆ ಗೀತಾ ಶಿವರಾಜಕುಮಾರ್ ಭೇಟಿ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧುಬಂಗಾರಪ್ಪ, ನಟ ಶಿವರಾಜಕುಮಾರ್, ಶಾಸಕ ಬೇಳೂರು ಗೋಪಾಲಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿ ಎಸ್. ರಾಮಪ್ಪ, ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಎಚ್.ಆರ್. ರವಿಕುಮಾರ್, ಪ್ರಭಾವಾತಿ ಚಂದ್ರಕಾಂತ್, ಓಂಕಾರ ಮುರಕ್ಕಿ,ಗಣೇಶ ಜಾಕಿ, ರವಿ ಅಳೂರು, ವಿಜಯ ಅಡಗಳಲೆ, ದೇವರಾಜ ಕಪ್ಪದೂರು, ಶ್ರೀದೇವಿ ರಾಮಚಂದ್ರ, ಸಂದ್ಯಾ ಸಿಗಂದೂರು, ಸುಧಾಕರ ಮಾವಿನಕೈ, ಶಶಿ ಜೈನ್, ಪ್ರಶಾಂತ ಬೈನೆಮನೆ ಸೇರಿ ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post