ಕಲ್ಪ ಮೀಡಿಯಾ ಹೌಸ್
ಸಾಗರ: ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಮಹಾಗಣಪತಿ ಸ್ವಾಮಿಯವರ ಅದ್ಧೂರಿಯ ರಥೋತ್ಸವ ಇಂದು ವಿಜೃಂಭಣೆಯಿಂದ ನಡೆಯಿತು.
ರಥೋತ್ಸವದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ವಿಶೇಷ ಪಂಚಾಮೃತ ಆಭಿಷೇಕ, ವಿಶೇಷ ಅಲಂಕಾರ, ಪೂಜೆ, ಹೋಮ ಹವನ, ಪಲ್ಲಕ್ಕಿ ಉತ್ಸವಗಳು ವೇದೋಕ್ತ ಮಂತ್ರಗಳೊಂದಿಗೆ ಜರುಗಿತು.

ಸುಡುತ್ತಿದ್ದ ಬಿಸಿಲನ್ನು ಲೆಕ್ಕಿಸದೆ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಹಾಲಪ್ಪ, ಸಾಗರದ ಮಹಾಗಣಪತಿ ರಥೋತ್ಸವ ರಾಜ್ಯದಲ್ಲೇ ಪ್ರಸಿದ್ಧಿ ಪಡೆದಿದೆ. ಪ್ರತಿವರ್ಷ ರಾಜ್ಯದ ಹಲವು ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಆದರೆ ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಮುಂಜಾಗ್ರತೆಯೊಂದಿಗೆ ರಥೋತ್ಸವ ಆಚರಿಸಲಾಗಿದೆ. ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದು ಎಷ್ಟು ಮುಖ್ಯವೋ, ಜನರ ಆರೋಗ್ಯವೂ ಅಷ್ಟೇ ಮುಖ್ಯ ಹೀಗಾಗಿ ಕೊರೋನಾ ನಿಯಮಗಳನ್ನು ಪಾಲಿಸಿ ಎಂದು ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post