ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರ ತಾಲ್ಲೂಕಿನ ಹೊಸಂತೆ ಗೌತಮಪುರ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಚನ್ನಾಪುರದ ಪ್ರಮೋದ್ (23) ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ಶಿವಮೊಗ್ಗದ ಆಸೀಫ್ (21) ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಚನ್ನಾಪುರದ ಪ್ರಮೋದ್ ತನ್ನ ಅಜ್ಜಿ ದೇವಮ್ಮ (70) ಅವರನ್ನು ತ್ಯಾಗರ್ತಿಗೆ ಕರೆದುಕೊಂಡು ಹೋಗುತ್ತಿದ್ದರು. ಆಗ ಶಿವಮೊಗ್ಗದಿಂದ ಹೊಸಂತೆಗೆ ಬರುತ್ತಿದ್ದ ಬೈಕ್‌ಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ದೇವಮ್ಮ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ.
Also read: ಅಂತರ್ ಜಿಲ್ಲಾಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ: ಶಿವಮೊಗ್ಗ ತಂಡಕ್ಕೆ ಗೆಲುವು
ಶಿವಮೊಗ್ಗದ ತೌಸಿಫ್ (30) ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















