ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಮಾರ್ಚ್ 20ರಂದು ಶಿವಮೊಗ್ಗದಲ್ಲಿ ಕಿಸಾನ್ ಮಹಾಪಂಚಾಯತ್ ರೈತ ಸಮಾವೇಶ ನಡೆಸಲಾಗುತ್ತಿದೆ ಎಂದು ಪ್ರಗತಿಪರ ಚಿಂತಕ ಹೆಚ್.ಬಿ. ರಾಘವೇಂದ್ರ ಹೇಳಿದರು.
ಅವರು ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿ, ದೆಹಲಿಯಲ್ಲಿ 120 ದಿನಗಳಿಂದ ಹೋರಾಟ ಮಾಡುತ್ತಿದ್ದರು ಅದನ್ನು ಲೆಕ್ಕಿಸದೇ ಪ್ರಜಾಪ್ರಭುತ್ವ ದೇಶದಲ್ಲಿ ಸರ್ವಾಧಿಕಾರಿ ಧೋರಣೆಯ ಬಗ್ಗೆ ಅಧಿಕಾರ ನಡೆಸಲು ಹೊಂಚು ಹಾಕುತ್ತಿದ್ದಾರೆ. ದೇಶದಲ್ಲಿ ರೈತರಿಗೆ ಕರಾಳ ಎನಿಸುವ ಕಾನೂನುಗಳು ಜಾರಿಗೆ ಬಾರದಂತೆ ತಡೆಯುವ ಉದ್ದೇಶದಿಂದ ಹಾಗೂ ಈ ಹೋರಾಟವನ್ನು ಬೆಂಬಲಿಸಿ ಶಿವಮೊಗ್ಗದಲ್ಲಿ ಮಾರ್ಚ್ 20ರಂದು ಕಿಸಾನ್ ಮಹಾ ಪಂಚಾಯತ್ ಹೆಸರಿನಲ್ಲಿ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.
ರೈತ ಹೋರಾಟ ಈ ದೇಶದಲ್ಲಿ ದಿಕ್ಕನ್ನು ಬದಲಿಸುವತ್ತ ಹೆಜ್ಜೆ ಇಟ್ಟಿದ್ದು ಈ ರೈತ ಸಮಾವೇಶಕ್ಕೆ ದಲಿತರು, ಬಡವರು, ಶೋಷಿತರು, ಕಾರ್ಮಿಕರು ಆಗಮಿಸಿ ಈ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿ.ಪಂ. ಸದಸ್ಯ ರವಿ ಕುಗ್ವೆ, ಸುನೀಲ್, ದೂಗೂರು ಪರಮೇಶ್, ರವಿ ಜಂಬಗಾರು, ಸುಧಾಕರ ಕುಗ್ವೆ, ತುಕಾರಾಮ ಶಿರವಾಳ ಹಾಜರಿದ್ದು ರೈತ ಪಂಚಾಯತ್ ಬಗ್ಗೆ ಮಾತನಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post