ಕಲ್ಪ ಮೀಡಿಯಾ ಹೌಸ್ | ಸಾಗರ |
ತಾಲೂಕಿನ ಉಳ್ಳೂರು ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ವೊಂದು ರಸ್ತೆ ಬದಿ ಹಳ್ಳಕ್ಕೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.
ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸರ್ಕಾರಿ ಸಾರಿಗೆ ಬಸ್‌ಗೆ ಉಳ್ಳೂರು ರಸ್ತೆ ತಿರುವಿನಲ್ಲಿ ದ್ವಿಚಕ್ರ ವಾಹನವೊಂದು ಅಡ್ಡ ಬಂದಿದೆ. ಇದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ 15ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇವರನ್ನೆಲ್ಲಾ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
Also read: ಮರವಂತೆ-ಬೈಂದೂರಿನಲ್ಲಿ 300 ಕೋಟಿ ರೂ.ಗೂ ಅಧಿಕ ಕಾಮಗಾರಿಗೆ ಸಂಸದ ರಾಘವೇಂದ್ರ ಪ್ರಯತ್ನ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















