ಕಲ್ಪ ಮೀಡಿಯಾ ಹೌಸ್
ಸಾಗರ: ತಾಲ್ಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಕಾರ್ಯನಿರ್ವಸುತ್ತಿದ್ದ ಮೀನಾಕ್ಷಿ ಅನಾರೋಗ್ಯ ಕಾರಣ ಶುಕ್ರವಾರ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಒಂದೂವರೆ ವರ್ಷದಿಂದ ಸಾಗರ ತಾಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿದ್ದ ಇವರು, ಇತ್ತೀಚೆಗೆ ಕಚೇರಿ ಕೆಲಸ ಮುಗಿಸಿ ತನ್ನ ಸ್ವಂತ ಊರಾದ ಭದ್ರಾವತಿ ಪಕ್ಕದ ಹಳ್ಳಿಗೆ ಬಸ್ಸಿನಲ್ಲಿ ಹೋಗುತ್ತಿರುವಾಗ ತಲೆ ತಿರುಗಿ ಬಿದ್ದಿದ್ದರು. ನಂತರ ಶಿವಮೊಗ್ಗದ ಆಸ್ಪತ್ರೆಯಲ್ಲಿ ತಪಾಸಣೆ ಮಾಡುವಾಗ ಅವರಿಗೆ ಬ್ರೈನ್ ಟ್ಯೂಮರ್ ಇದ್ದದ್ದು ಗೊತ್ತಾಗಿದೆ. ನಂತರ ಶಸ್ತ್ರ ಚಿಕಿತ್ಸೆ ಕೂಡ ಮಾಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೀನಾಕ್ಷಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post