ಕಲ್ಪ ಮೀಡಿಯಾ ಹೌಸ್ | ಸಾಗರ |
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಜಿ.ಎಮ್. ಗಂಗಾಧರ ಸ್ವಾಮಿಯವರನ್ನು ಶಾಸಕ ಹೆಚ್. ಹಾಲಪ್ಪ ಬೆಂಗಳೂರಿನಲ್ಲಿ ಬೇಟಿಯಾಗಿ ಹೊಸನಗರ ಪಟ್ಟಣ, ಗ್ರಾಮಾಂತರ ಹಾಗೂ ಸಾಗರ ತಾ. ಕರೂರು ಮತ್ತು ಬಾರಂಗಿ ಹೋಬಳಿಯ ಗ್ರಾಮಗಳಿಗೆ ಕುಡಿಯುವ ನೀರು ಕಲ್ಪಿಸುವ ಯೋಜನೆ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಸಿಇ ಅಜೀಜ್ ಹುಸೇನ್, ನಾಗರಾಜ್ ಬೊಬ್ಬಿಗೆ ಉಪಸ್ಥಿತರಿದ್ದರು.
ಸಾಗರದ ಗಾಂಧಿ ಮೈದಾನದಲ್ಲಿ ಸೆ.25ರಂದು ಆಯೋಜಿಸಲಾಗಿರುವ “ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನ ಆಚರಣೆ” ಕುರಿತು ಬೂತ್ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳೊಂದಿಗೆ ಶಾಸಕ ಹೆಚ್. ಹಾಲಪ್ಪ ಪೂರ್ವಭಾವಿ ಸಭೆ ನಡೆಸಿ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಭಾವಚಿತ್ರ ವಿತರಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷರು, ಮಂಡಲಗಳ ಅಧ್ಯಕ್ಷರು, ಪ್ರಭಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.
ಶ್ರೀ ನಾರಾಯಣಗುರು ವಿಚಾರ ವೇದಿಕೆ ವತಿಯಿಂದ ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಕಾರ್ಯಕ್ರಮದಲ್ಲಿ ಶಾಸಕರಾದ ಹೆಚ್. ಹಾಲಪ್ಪ ಪಾಲ್ಗೊಂಡು, ಅಭಿನಂದನೆ ಸ್ವೀಕರಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ವಿಚಾರ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post