ಕಲ್ಪ ಮೀಡಿಯಾ ಹೌಸ್ | ಸಾಗರ |
ಶಾಸಕ ಹೆಚ್ .ಹಾಲಪ್ಪ MLA Halappa ಬೆಂಗಳೂರಿನಲ್ಲಿ ನಗರಸಭೆ ನಿಯೋಗದೊಂದಿಗೆ ವಸತಿ ಸಚಿವ ವಿ. ಸೋಮಣ್ಣ Minister Somanna ಅವರನ್ನು ಭೇಟಿಮಾಡಿ, ಸಾಗರ ನಗರಸಭೆ ವ್ಯಾಪ್ತಿಯ ಸ್ಲಂ ಬೋರ್ಡ್ ವಸತಿ ಯೋಜನೆಯ ಅಪೂರ್ಣಗೊಂಡ ಮನೆಗಳ ನಿರ್ಮಾಣ ಕಾಮಗಾರಿ ಹಾಗೂ ಇದರಿಂದ ಫಲಾನುಭವಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಿಸಿ. ನಂತರ ಸ್ಲಂ ಬೋರ್ಡ್ ಅಧಿಕಾರಿಗಳೊಂದಿಗೆ ಸದರಿ ವಿಷಯದ ಬಗ್ಗೆ ಚರ್ಚಿಸಿದರು.
ಉನ್ನತ ಮಟ್ಟದ ಅಧಿಕಾರಿಗಳು ಶೀಘ್ರದಲ್ಲಿ ಸಾಗರಕ್ಕೆ ಆಗಮಿಸಿ, ಸ್ಥಳ ಪರಿಶೀಲಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಂಡುವಂತೆ ಸೂಚಿಸಿದರು. ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಪೌರಾಯುಕ್ತರು, ಕಾರ್ಯಪಾಲಕ ಅಭಿಯಂತರರು ಉಪಸ್ಥಿತರಿದ್ದರು.
Also read: ಮಾಧ್ಯಮಗಳಲ್ಲಿ ಸಮಾಜದ ಶಾಂತಿ ಕದಡುವ ವಿಷಯಗಳ ವೈಭವೀಕರಣ: ಹೆಚ್‌ಡಿಕೆ ಬೇಸರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post