ಕಲ್ಪ ಮೀಡಿಯಾ ಹೌಸ್
ಸಾಗರ: ತಾಲೂಕಿನ ಉಪವಿಭಾಗೀಯ ಆಸ್ಪತ್ರೆಗೆ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿ ಮೂಲ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು.
ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಾಗರದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈಗಾಗಲೇ ಮಂಜೂರಾತಿ ಪಡೆಯಲಾಗಿದೆ. ಎಮ್‌ಎಸ್‌ಐಎಲ್ ವತಿಯಿಂದ ನಿರ್ಮಿಸುವ ಬಗ್ಗೆ ತೀರ್ಮಾನಿಸಿದ್ದು ಕಾರ್ಯ ಪ್ರಗತಿಯಲ್ಲಿದೆ ಎಂದರು.

ಆಕ್ಸಿಜನ್ ಪ್ಲಾಂಟ್‌ಗಳನ್ನು ಒಂದು ಸಾಗರದಲ್ಲಿ ಹಾಗೂ ಇನ್ನೊಂದನ್ನು ಹೊಸನಗರದಲ್ಲಿ ನಿರ್ಮಿಸಲಾಗುವುದು. ಆಸ್ಪತ್ರೆಯಲ್ಲಿ 100 ಕ್ಕಿಂತ ಹೆಚ್ ಬೆಡ್‌ಗಳನ್ನು ಕೋವಿಡ್ ಸೆಂಟರ್‌ಗೆ ಬಳಸಲು ಸರ್ಕಾರಕ್ಕೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸಬೇಕಿದೆ, ಜಂಬಗಾರು ವಿದ್ಯಾರ್ಥಿನಿ ನಿಲಯದಲ್ಲಿ 100 ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರ ನಿರ್ಮಿಸಿ, ಅಗತ್ಯ ಸಿಬ್ಬಂದಿ ನಿಯೋಜಿಸಲು ಕ್ರಮ ಕೈಗೊಳ್ಳಲಾಗುವು ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















