ಕಲ್ಪ ಮೀಡಿಯಾ ಹೌಸ್
ಸಾಗರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಾಗರ ಶಾಖೆ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿವಸ ಸಲುವಾಗಿ ಸಂಘ ಸದನ ಶ್ರೀನಗರದಲ್ಲಿ ಧ್ವಜಾರೋಹಣ ಮಾಡುವುದರ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯದರ್ಶಿ ಅಭಿಷೇಕ ಶೆಟ್ಟಿ, ವಿದ್ಯಾರ್ಥಿ ದಿವಸದ ಬಗ್ಗೆ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಸಾಧನೆಗಳ ಬಗ್ಗೆ ತಿಳಿಸಿಕೊಟ್ಟರು. ನಂತರ ಅಧ್ಯಕ್ಷ ಡಾ. ಶ್ರೀಪಾದ ಹೆಗಡೆ ವರದಿಯನ್ನು ಮಂಡಿಸಿದರು.
ಉಪಾಧ್ಯಕ್ಷ ವಿಷ್ಣು ಶರ್ಮಾ, ಸಂಘ ಪರಿವಾರದ ಕಾರ್ಯಕರ್ತರು, ವಿಶ್ವ ಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ಹಾಗೂ ಮಾತೃಶಕ್ತಿಯ ಕಾರ್ಯಕರ್ತರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post