ಕಲ್ಪ ಮೀಡಿಯಾ ಹೌಸ್
ಸಾಗರ: ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ತಾಳಗುಪ್ಪ ಬಳಿಯ ರೈಲ್ವೆ ಹಳಿ ಜಲಾವೃತವಾಗಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಮಳೆಯಿಂದಾಗಿ ವರದಾ ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹದಂತ ಪರಿಸ್ಥಿತಿ ಉಂಟಾಗಿದೆ. ಪರಿಣಾಮವಾಗಿ ಅರ್ಧ ಕಿಲೋ ಮೀಟರ್’ಗೂ ದೂರ ರೈಲು ಹಳಿಯ ಮೇಲೆ ನೀರು ನಿಂತಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆಯೇ ಎಂಬ ಪ್ರಶ್ನೆ ಉದ್ಬವವಾಗಿದೆ. ಇನ್ನು, ಮೈಸೂರಿನಿಂದ ತಾಳಗುಪ್ಪಕ್ಕೆ ತೆರಳಬೇಕಿದ್ದ ಎಕ್ಸ್’ಪ್ರೆಸ್ ರೈಲನ್ನು ಸಾಗರದಲ್ಲಿಯೇ ನಿಲ್ಲಿಸಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post