ಕಲ್ಪ ಮೀಡಿಯಾ ಹೌಸ್
ಸಾಗರ: ರೈತರ ಬದುಕನ್ನು ಹಸನುಗೊಳಿಸುವಂತಹ ಕಾರ್ಯವನ್ನು ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ನಡೆಸಬೇಕು ಎಂದು ಶಾಸಕ ಎಚ್. ಹಾಲಪ್ಪ ಹೇಳಿದರು.
ಪ್ರಸಕ್ತ ವರ್ಷದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೃಷಿ ಇಲಾಖೆಯ ಯೋಜನೆಗಳು ಕೇವಲ ಬಳಕೆಯಾಗದೆ ರೈತರಿಗೆ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು. ನಮ್ಮ ದೇಶದಲ್ಲಿ ರೈತ ದಿನದ ಹನ್ನೆರಡು ಗಂಟೆ ಕೆಲಸ ಮಾಡುತ್ತಾನೆ. ಆದ್ದರಿಂದಲೇ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿ ದೇಶವಾಗಿ ನೆರೆ ದೇಶಕ್ಕೆ ಆಹಾರ ಸಾಮಗ್ರಿಗಳನ್ನು ರಫ್ತು ಮಾಡಲಿಕ್ಕೆ ಸಾಧ್ಯವಾಗುತ್ತಿದೆ. ಇದರ ಹಿಂದೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳ ಸಲಹೆ ಸಹಕಾರವೂ ಸಹ ಇದೆ ಎಂದು ಶ್ಲಾಘಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಅಭಿಯಾನ ಕಾರ್ಯಕ್ರಮದಲ್ಲಿ ಸರ್ಕಾರದ ಇತರೆ ೭ ಇಲಾಖೆ ಅಧಿಕಾರಿಗಳು ಇರಬೇಕಿತ್ತು. ಅರಣ್ಯ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಇದು ಅಧಿಕಾರಿಗಳ ಅಸಡ್ಡೆ ಎಂದು ಅಧಿಕಾರಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕಾಶಿನಾಥ್, ತಾಲೂಕು ಉಪ ವಿಭಾಗಾಧಿಕಾರಿ ನಾಗರಾಜ್, ಕೃಷಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಇತರ ಇಲಾಖೆಯವರು ಹಾಜರಿದ್ದರು.
(ವರದಿ: ಪವನ್ ಕುಮಾರ್ ಕಠಾರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post