ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಚಲಿಸುತ್ತಿದ್ದ ಬಸ್’ನಿಂದ ಮೂವರು ಪ್ರಯಾಣಿಕರು ಹೊರಕ್ಕೆ ಹಾರಿದ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಸಿರಿವಂತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು, ಬಸ್’ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡ ಪರಿಣಾಮ ಆತಂಕಗೊಂಡ ಇಬ್ಬರು ಯುವತಿಯರು ಹಾಗೂ ಓರ್ವ ಯುವಕ ಏಕಾಏಕಿ ಬಸ್’ನಿಂದ ಹಾರಿದ್ದಾರೆ. ಪರಿಣಾಮವಾಗಿ ಮೂವರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಸ್ಥಳೀಯರ ನೆರವಿನಿಂದ ಮೂವರನ್ನೂ ಟಾಟಾ ಏಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post