ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ತಾಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡಬಾಳೆ ಗ್ರಾಮದಲ್ಲಿ ಮರ ಬಿದ್ದು ಹಾನಿಗೊಳಗಾದ ಮನೆಯ ಪ್ರದೇಶಕ್ಕೆ ಶಾಸಕ ಎಚ್. ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮದ ಪಾರ್ವತಮ್ಮ ವೀರೇಂದ್ರ ಅವರ ಮನೆಯ ಮೇಲೆ ಮರ ಬಿದ್ದು, ತೀವ್ರ ಹಾನಿಗೆ ಒಳಗಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಹಾಲಪ್ಪನವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ಪಡೆದುಕೊಂಡರು. ಇವರಿಗೆ ಸರ್ಕಾರದಿಂದ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
ಸಾಗರದ ಆದಿಶಕ್ತಿ ನಗರದಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ, ಮೀನುಗಾರರಿಗೆ ಉಕ್ಕಡ, ಬಲೆ, ದ್ವಿಚಕ್ರ ವಾಹನ ಹಾಗೂ ಇನ್ನಿತರ ಪರಿಕರಗಳ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಫಲಾನುಭವಿಗಳಿಗೆ ಪರಿಕರಗಳನ್ನು ಶಾಸಕರು ವಿತರಿಸಿದರು.
ಹೊಸನಗರ ತಾಲೂಕಿನ ಮುಂಬಾರು, ಮಾರುತಿಪುರ, ಕೆಂಚನಾಳ, ಬೆಳ್ಳೂರು ಹಾಗೂ ಸಾಗರ ತಾ. ಕಲ್ಮನೆ ಹಾಗೂ ಯಡೇಹಳ್ಳಿ ಗ್ರಾಮ ಪಂಚಾಯ್ತಿಗಳಿಗೆ ನೂತನವಾಗಿ ಆಯ್ಕೆಯಾದ ಸದಸ್ಯರನ್ನು ಶಾಸಕ ಹಾಲಪ್ಪ ಅಭಿನಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post