ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಹಿತಿ ಪ್ರೊ.ಭಗವಾನ್ Prof. Bhagavan ವಿರುದ್ಧ ಸಾಗರದ ಜೆ ಎಂ ಎಫ್ ಸಿ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿದ್ದು, ಅವರಿಗೆ ಬಂಧನ ಭೀತಿ ಎದುರಾಗಿದೆ.
ರಾಮ ಮಂದಿರ ಏಕೆ ಬೇಡ? ಎಂಬ ವಿವಾದಾತ್ಮಕ ಕೃತಿ ಬರೆದಿದ್ದ ಮೈಸೂರಿನ ಸಾಹಿತಿ ಭಗವಾನ್ ವಿರುದ್ದ ಇಕ್ಕೇರಿಯ ಮಹಾಬಲೇಶ್ವರ ಎಂಬ ಸಂಘ ಪರಿವಾದ ಕಾರ್ಯಕರ್ತ ಖಾಸಗಿ ದೂರೊಂದನ್ನ ದಾಖಲಿಸಿದ್ದರು. ಸಾಗರ ಜೆಎಮ್‌ಎಫ್‌ಸಿ ನ್ಯಾಯಾಲಯ ಈ ಬಗ್ಗೆ ದೀರ್ಘಕಾಲದ ವಿಚಾರಣೆ ನಡೆಸಿ, ಭಗವಾನ್ ವಿರುದ್ಧ ಐಪಿಸಿ ಸೆಕ್ಷನ್ 295(a) ರಡಿಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಸಂಬಂದ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಇಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮೈಸೂರ್ ಎಸ್‌ಪಿ ಮೂಲಕ ಸಮನ್ಸ್ ಜಾರಿ ಮಾಡಿದ್ದರೂ, ಭಗವಾನ್ ಇಂದು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಇದರಿಂದನ್ಯಾಯಾದೀಶರಾದ ಶ್ರೀಶೈಲ ಬೀಮಸೇನ್ ಭಗಾಡೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post