ಕಲ್ಪ ಮೀಡಿಯಾ ಹೌಸ್
ಸಾಗರ: ಕೆಲವು ಕೇಂದ್ರಗಳಲ್ಲಿ ಕೊರೋನಾ ಲಸಿಕೆ ವಿತರಣೆಯಲ್ಲಿ ತೊಂದರೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಶಾಸಕ ಎಚ್. ಹಾಲಪ್ಪ ಅವರು ಇಂದು ಲಸಿಕಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ದೇವರಾಜ ಅರಸು ಬಡಾವಣೆಯಲ್ಲಿ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು. ಲಸಿಕೆ ವಿತರಣೆಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ, ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಇದೇ ವೇಳೆ ಸಾರ್ವಜನಿಕರಿಂದ ಶಾಸಕರು ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಟಿಎಚ್’ಒ ಮೋಹನ್, ಡಾ. ಪ್ರಕಾಶ್ ಬೋಸ್ಲೆ, ಮ.ಸ. ನಂಜುಂಡಸ್ವಾಮಿ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post