ಕಲ್ಪ ಮೀಡಿಯಾ ಹೌಸ್ | ಸಾಗರ |
ಹಾಲಿ ಸಂಸದ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ B Y Raghavendra ಅವರು ಸಾಗರ ತಾಲೂಕಿನ ಹಲವು ಪ್ರದೇಶಗಳಲ್ಲಿ ಬಿರುಸಿನ ಪ್ರಚಾರ ನಡೆಸಿ, ಚುನಾವಣೆಯಲ್ಲಿ ಬೆಂಬಲಿಸುವಂತೆ ವಿನಂತಿಸಿದರು.
ವರದಹಳ್ಳಿಗೆ ಭೇಟಿ
ವರದಹಳ್ಳಿಯ ಶ್ರೀ ಕ್ಷೇತ್ರ ವರದಪುರ ಶ್ರೀಧರಾಶ್ರಮಕ್ಕೆ Varadapura Shridhara Ashrama ಭೇಟಿ ನೀಡಿದ ಅವರು ತೀರ್ಥ ಪ್ರೋಕ್ಷಣೆ ಮಾಡಿಕೊಂಡು, ಮೆಟ್ಟಿಗಳನ್ನು ಏರಿ ಆಶ್ರಮಕ್ಕೆ ತಲುಪಿದರು.
ಶ್ರೀಧರ ಸ್ವಾಮಿಗಳಿಗೆ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಿದ ಅವರು, ತಮ್ಮ ಗೆಲುವಿಗಾಗಿ ಪ್ರಾರ್ಥಿಸಿದರು.

ಇನ್ನು, ಸಾಗರ ಮಂಡಲ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ಅವರು, ಕಳೆದ ಎರಡು ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ನೂರಾರು ಜನಪ್ರಿಯ ಯೋಜನೆಗಳ ಬಗ್ಗೆ ತಿಳಿಸಿಕೊಟ್ಟರು.
ತಮ್ಮ ಲೋಕಸಭಾ ಅವಧಿಯಲ್ಲಿ ಸಾಗರ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಕೈಗೊಂಡಿರುವ ಕಾಮಗಾರಿಗಳ ಕುರಿತು ಮತದಾರ ಬಾಂಧವರಲ್ಲಿ ಮನವರಿಕೆ ಮಾಡುವ ಮೂಲಕ ಬರುವ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿನಲ್ಲಿ ಕಾರಣಿಭೂತರಾಗುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.
Also read: ವಿದ್ಯಾರ್ಥಿ ವೇತನದ ಮೌಲ್ಯ ಹೆಚ್ಚಿಸಿ | ಎನ್‌ಇಎಸ್ ಅಧ್ಯಕ್ಷ ನಾರಾಯಣರಾವ್

ಇದೇ ವೇಳೆ ಸಾಗರ ತಾಲೂಕು ಮಂಕಳಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀ ಶಂಭುಲಿಂಗೇಶ್ವರ ಮತ್ತು ಶ್ರೀ ಮಹಾಕಾಳಿ ಹಾಗೂ ಪರಿವಾರ ದೇವರುಗಳ ದೇವಸ್ಥಾನ ಉದ್ಘಾಟನೆ ನಿಮಿತ್ತ ಹಮ್ಮಿಕೊಂಡಿರುವ ಐದನೇ ದಿನದ ಪ್ರತಿಷ್ಠಾಪನಾ ಕುಂಭಾಭಿಷೇಕ ಹಾಗೂ ಬ್ರಹ್ಮಕಲಶೋತ್ಸವ ಧಾರ್ಮಿಕ ಸಮಾರಂಭದಲ್ಲಿ ಸಂಸದರು ಭಾಗವಹಿಸಿದರು.
ದಿವ್ಯ ಸಾನಿಧ್ಯ ವಹಿಸಿದ್ದ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಗಳ ಆಶೀರ್ವಾದ ಪಡೆದು ನೆರೆದಿದ್ದ ಅಪಾರ ಸಂಖ್ಯೆಯ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್, ಮುಖಂಡರಾದ ಗುರುಮೂರ್ತಿ, ಪ್ರಸನ್ನ ಕೆರೆಕೈ, ಗಣೇಶ್ ಪ್ರಸಾದ್, ದತ್ತಾತ್ರೇಯ ಅವರುಗಳಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post