ಕಲ್ಪ ಮೀಡಿಯಾ ಹೌಸ್ | ಸಾಗರ |
ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆನಂದಪುರ ಮೂಲದ ಫೋಟೊಗ್ರಾಫರ್ ಅರುಣ್ (30) ಮೃತಪಟ್ಟಿದ್ದಾರೆ. ಮತ್ತೋರ್ವ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಗರ ಪಟ್ಟಣದ ಜಂಬಗಾರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಘಟನೆ ಸಂಭವಿಸಿದ್ದು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಫೋಟೊಗ್ರಾಫರ್ ಅರುಣ್‌ಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಕುಂಸಿ ಬಳಿ ಮೃತಪಟ್ಟಿದ್ದಾರೆ. ಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

























