ಕಲ್ಪ ಮೀಡಿಯಾ ಹೌಸ್
ಸಾಗರ: ತಾಲೂಕಿನಾದ್ಯಂತ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಕೆಲವು ಮನೆಗಳಿಗೆ ಹಾನಿಯಾಗಿದೆ.
ಜಲಾವೃತಗೊಂಡಿರುವ ಹಾಗೂ ಮನೆ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಇಂದು ಮುಂಜಾನೆಯಿಂದಲೇ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಶಾಸಕ ಎಚ್. ಹಾಲಪ್ಪ, ಕುಸಿದ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಅಧಿಕಾರಿಗಳು ಶರವೇಗದಲ್ಲಿ ಕಾರ್ಯಪ್ರವೃತ್ತರಾಗಬೇಕು. ಸಾರ್ವಜನಿಕರಿಗೆ ತೊಂದರೆಗಳಿಗೆ ಸ್ಪಂದಿಸಬೇಕು ಎಂದು ಸೂಚನೆ ನೀಡಿದರು.

ಇನ್ನು, ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಮಲೆನಾಡಿನಲ್ಲಿ ಭಾರಿ ಅನಾಹುತವನ್ನೇ ಮಾಡಿದ್ದು, ವರದಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮವಾಗಿ ಗದ್ದೆ, ತೋಟಗಳಿಗೆ ನೀರು ನುಗ್ಗಿದ್ದು, ಹಲವೆಡೆ ಅಡಿಕೆ ಮರಗಳು ಧರೆಗುರುಳಿವೆ. ಹಲವು ಬೆಳೆಗಳು ನೀರು ಪಾಲಾಗಿವೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ ನದಿಯು ಶ್ರೀನಗರದ ಗದ್ದೆಗಳಿಗೆ ನುಗ್ಗಿದ್ದು ಪಂಪ್ ಸೆಟ್‌ಗಳು ನೀರು ಪಾಲಾಗಿವೆ. ಸಾಗರದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿವೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















